Home Posts tagged #abayacnadra jain

ಮರಳು ಮಾಫಿಯಾವೇ ಮರವೂರು ಸೇತುವೆ ಬಿರುಕಿಗೆ ಕಾರಣ: ಅಭಯಚಂದ್ರ ಜೈನ್

ಮರುವೂರು ಸೇತುವೆ ಬಿರುಕು ಬಿಟ್ಟಿರುವುದು ಆಘಾತಕಾರಿ ವಿಚಾರವಾಗಿದೆ. ಮರಳು ಮಾಫಿಯಾವೇ ಈ ಅವಘಡಕ್ಕೆ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ.