Home Posts tagged #ACCIDENT NEWS

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು

ನಿತ್ಯ ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ ಪಡುಬಿದ್ರಿ ಸೇತುವೆ ಪ್ರದೇಶ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ 66ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ. ಈ ಅಪಘಾತಕ್ಕೆ

ಉಳ್ಳಾಲ: ಟಿಪ್ಪರ್‌ ಅಪಘಾತ -ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.ಜೂ.28 ರಂದು ಗಣೇಶ ಪಾವೂರು

ಸ್ಕೂಟರ್ ಗೆ ಅಡ್ಡ ಬಂದ ದನ, ಹಾರಿ ಹೋಯ್ತು ಯುವಕನ ಪ್ರಾಣ!!

ಸುರತ್ಕಲ್: ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಜೆ ಪಣಂಬೂರು ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ಉಜ್ವಲ್(26) ಸಾವನ್ನಪ್ಪಿದ ದುರ್ದೈವಿ.ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯ : ಸಹಾಯದ ನಿರೀಕ್ಷೆಯಲ್ಲಿ ‘ಪ್ರದೀಪ್ ಅಡ್ಕ’

ನಮ್ಮ ಯುವ ತೇಜಸ್ಸಿನ ಆಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ‘ಪ್ರದೀಪ್ ಅಡ್ಕ’ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು, ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆಂಬುಲೆನ್ಸ್‌ನಲ್ಲಿ ಬಹಳಷ್ಟು ಬಾರಿ ಬಡವರಿಗೆ (ಕಷ್ಟದಲ್ಲಿರುವವರಿಗೆ) ಜನರಿಗೆ ಉಚಿತ ಸೇವೆಯನ್ನು ಒದಗಿಸಲೂ ಕಾರಣಕರ್ತರಾದ ಬಡ ಕುಟುಂಬದ ಪ್ರದೀಪರು ಯುವ ತೇಜಸ್ಸಿನ ನಲ್ಮೆಯ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ -ಕಂಟೈನರ್,ಇನ್ನೋವಾ ಡಿಕ್ಕಿ- ತಾಯಿ, ಮಗ ದುರ್ಮರಣ

ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ

ಮಂಜೇಶ್ವರ : ರಾ.ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ – ಮೂವರ ದಾರುಣ ಅಂತ್ಯ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ತ್ರಿಶೂರು ಭಾಗಕ್ಕೆ ಕಾರಿನಲ್ಲಿ ಸಂಚರಿಸುತಿದ್ದ

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಟೆಕಾರು : ಕಾರು ಢಿಕ್ಕಿ – ಪಾದಚಾರಿ ಸಾವು

ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತರು.ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.ಇಂದು ಮದ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ಗೆ ಢಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.