ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ
ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು
ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ
ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಎನ್ .ಎಸ್ ಟ್ರಾವೆಲ್ಸ್ ಬಸ್ಸು ವಿರುದ್ಧ
ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ
ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಶನಿವಾರ ಸಂಜೆ ಆರ್ವಾರ್ – ಅಂಬುತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ
ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ
ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ನಡೆದಿದೆ.ಮೃತ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ರವರ ಪುತ್ರ ನಿಜಾಮ್ (22)ಎಂದು ಗುರುತಿಸಲಾಗಿದೆ.ಕಾರ್ಕಳ ಸಾಣೂರು ನಿಂದ ತನ್ನ ಕೆಲಸಕ್ಕೆಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ಟೇಕ್
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸೀದಿ ಸಮೀಪ ಹೆದ್ದಾರಿಯ ಹೊಂಡ ತಪ್ಪಿಸಲು ಹೋದ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಕೂಟರ್ ದಾಖಲೆ ಪರಿಶೀಲನೆ ಮಾಡಿದ ಸ್ಥಳೀಯ ಅದಮಾರು ನಿವಾಸಿ ನವನೀತ್ ಪಿ. ಎಂಬವರಿಗೆ ಸೇರಿದ್ದಾಗಿದ್ದು, ಅವರೇ ಈ ಸ್ಕೂಟರನ್ನು ಚಲಸಯಿಸುತ್ತಿದ್ದರೋ ಎಂಬುದು ದೃಢಪಟ್ಟಿಲ್ಲ. ಅದಮಾರು




























