ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ. ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ
ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ
ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್
ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೆರಂಪಳ್ಳಿ ಎಂಬಲ್ಲಿ ಸಂಭವಿಸಿದೆ. ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಮಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ. ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ
ಮೂಡುಬಿದಿರೆ: ಕಳೆದ ಭಾನುವಾರದಂದು ವಾಲ್ಪಾಡಿಯಲ್ಲಿ ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾಲ್ಪಾಡಿಯಲ್ಲಿ ಭಾನುವಾರ ಆಕ್ಟಿವಾ-ರಿಕ್ಷಾ ಮಧ್ಯೆ ಅಪಘಾತವಾಗಿದ್ದು ಇದರಲ್ಲಿ ಆಕ್ಟೀವಾ ಚಾಲಕ ವಾಲ್ಪಾಡಿ ನಿವಾಸಿ ಲೂವಿಸ್ ಡಿಕೋಸ್ತ (52)ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೂವಿಸ್ ಅವರು ವಾಲ್ಪಾಡಿಯಲ್ಲಿ ಅಂಗಡಿ ನಡೆಸುತ್ತಿದ್ದು ಭಾನುವಾರ ಮಧ್ಯಾಹ್ನದ
ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು
ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ
ಲಂಡನ್ : ಇಂಗ್ಲೆಂಡಿನಲ್ಲಿ ಭಾರತೀಯ ಮೂಲದ 36ರ ವಿಘ್ನೇಶ್ ಪಟ್ಟಾಭಿರಾಮನ್ ಎಂಬವರ ಸಾವು ಆಗಿದೆ. ಸೈಕಲಿನಲ್ಲಿ ಮನೆಗೆ ಹೋಗುವಾಗ ಅಪಘಾತವಾಗಿ ಸಾವಾಗಿದೆ ಎಂದು ಒಂದು ವರದಿ ಹೇಳಿದರೆ ಇನ್ನೊಂದು ಅದು ಕೊಲೆ ಎಂದು ವರದಿ ಮಾಡಿದೆ.ಬ್ರಿಟನ್ನಿನ ವೆಲ್ ರೀಡಿಂಗ್‌ನಲ್ಲಿ ಹೋಟೆಲೊಂದರ ಮ್ಯಾನೇಜರ್ ಆಗಿ ವಿಘ್ನೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಹೋಟೆಲಿಗೆ ಹತ್ತಿರದ ಪ್ಲೇಸ್ ಜಂಕ್ಷನ್‌ನಲ್ಲಿ ಸೈಕಲಿನಿಂದ ಅವರು ಬಿದ್ದು ಮೃತರಾಗಿದ್ದಾರೆ. ಬೀಳಲು
ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು,
ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ