ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2.45 ಕಿ.ಮೀ. ಉದ್ದದ ರನ್‍ವೇ ಮರುನಿರ್ಮಾಣ ಕಾಮಗಾರಿ ಮೇ 28ರಂದು ಪೂರ್ಣಗೊಂಡಿದೆ. ಈಗಾಗಲೇ ತಜ್ಞರ ತಂಡ ಪ್ರಾಥಮಿಕ ಸಮೀಕ್ಷೆ ನಡೆಸಿದ್ದು, ಅಂತಿಮ ಸಮೀಕ್ಷೆಯ ಬಳಿಕ ಜೂ. 1ರಿಂದ ಹಗಲು ವೇಳೆಯಲ್ಲೂ ನಿಲ್ದಾಣದ ಕಾರ್ಯಾಚರಣೆ ಆರಂಭವಾಗಲಿದೆ. ವಿಮಾನಯಾನ ಸುರಕ್ಷಾ ಮಾನದಂಡಗಳ ಪ್ರಕಾರ ಕಾಮಗಾರಿ ಕೈಗೊಳ್ಳಲಾಗಿದ್ದು,
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ