ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು
ಕಡಬದ ನೂತನ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾ.24ರಂದು ನಡೆಯಲಿದ್ದು ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಅಂಗಾರ ಅವರು, ಕಡಬ ತಾಲೂಕಿಗೆ
ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಕಟಪಾಡಿ ಗ್ರೀನ್ ವ್ಯಾಲಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವು ಉದ್ಘಾಟನೆ ಗೊಂಡಿತು. ಸಮಾವೇಷವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಒಟ್ಟು 155 ಗ್ರಾಪಂನ ವಿವಿಧ ಯೋಜನೆಗಳಡಿ ಸುಮಾರು 15 ಸಾವಿರ ಫಲಾನುಭವಿಗಳು ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಸಂಖ್ಯೆಯ 94ಸಿ/94ಸಿಸಿ
ಸಚಿವ ಅಂಗಾರ ಅವರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿ .ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದರು. ಸುಳ್ಯ ಬೆಳ್ಳಾರೆಯ ಮುಖ್ಯರಸ್ತೆ ಕಲ್ಲೋಣಿ ಎಂಬಲ್ಲಿ ಬಹಳ ವರ್ಷ ದಿಂದ ರಸ್ತೆ ಹದಗೆಟ್ಟು ಹೋದ ಕಾರಣದಿಂದ ಒಂದೂವರೆ ಕಿಲೋ ಮೀಟ ರ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಚಿವರ ಒಪ್ಪಿಗೆ ಪಡೆದು ಕಾಂಕ್ರಿಟೀಕರಣ ಮಾಡಲು ತೀರ್ಮಾನ ತೆಗೆದುಕೊಳ್ಳುವುದು. ಎಂದು ಬೆಳ್ಳಾರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ
ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ
ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ