ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ
ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ ಸರಕಾರದ ಬೊಕ್ಕಸಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಆಟೋರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ ವಾಪಾಸ್ ಅವರಿಗೆ ಯಾವುದೇ ಸವಲತ್ತುಗಳಿಲ್ಲ.ಇಂತಹ ಸಂದರ್ಭದಲ್ಲಿ ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ
ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು ಕೂಡ ಅಟೊ ಚಾಲಕರು ನೀಡಿದ್ದಾರೆ. ನಿಯಮದಂತೆ ನಗರದಲ್ಲಿ ಸಂಚರಿಸುವ ಅಟೋಗಳು ರೋಟೆಶನ್ ಮಾದರಿಯಲ್ಲಿ
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ
ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ ಎದ್ದು ಪರಾರಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ಕುಂಜತ್ತೂರು ಪದವು ರಸ್ತೆಯಂದ ಮದ್ಯವನ್ನು ಹೇರಿಕೊಂಡು ಆಗಮಿಸಿದ ರಿಕ್ಷಾ ಪಲ್ಟಿಯಾಗಿದೆ. ಬಳಿಕ ಊರವರು