ಜನವರಿ 22ರಂದು ನಮಗೆ ಐತಿಹಾಸಿಕ ದಿನ ಎಂದು ಕನ್ಯಾಡಿ ಶ್ರೀಗಳು ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ನಿತ್ಯಾನಂದ ನಗರದ ಶ್ರೀರಾಮ ದೇವಸ್ಥಾನದಲ್ಲಿ ಮಾತನಾಡಿ, ಸುಮಾರು 500 ವರ್ಷಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ನಡೆಯುತ್ತಿದೆ. ಇವತ್ತು ನಮ್ಮ ಕನಸು ನನಸಾಗಿದೆ. ಹಲವಾರು ಮಂದಿ ಕರಸೇವಕರ ಬಲಿದಾನದಿಂದ ಇವತ್ತು
ಅಯೋಧ್ಯೆಯಲ್ಲಿ ಕರ ಸೇವಕರಾಗಿ ಕೆಲಸ ಮಾಡಿದ ಬೆಳ್ತಂಗಡಿ ತಾಲೂಕಿನ ಹಲವಾರು ಮಂದಿ ಇದ್ದಾರೆ. ಅದರಲ್ಲಿ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಪಾಲ ಅಜ್ರಿ ಎಂಬವರು ಕೂಡ ಒಬ್ಬರು. ಅವರು 1991-92ರಲ್ಲಿ ಅಯೋಧ್ಯೆಗೆ ಹೋಗಿದ್ದರು. ಅಲ್ಲಿ ಕಷ್ಟಪಟ್ಟು ದಿನಗಳನ್ನು ವಿವರಿಸಿದ ಅವರು, ನಮ್ಮ ಹೋರಾಟದ ಫಲ ಇವತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ ಇದು ಇಡೀ ಜಗತ್ತಿಗೇ ಸಂತೋಷದ ವಿಚಾರ ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್ ಭಟ್, ನಿಟ್ಟೆ ಸಂಸ್ಥೆಯ ವಿಶಾಲ್ ಹೆಗ್ಡೆ, ಎಂ.ಬಿ. ಪುರಾಣಿಕ್ ದಂಪತಿ, ಸೇರಿದಂತೆ ಜಿಲ್ಲೆಯ ಎಲ್ಲಾ
ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಅದರಲ್ಲಿ
ಉಡುಪಿ: ದೇಶದಲ್ಲಿ ರಾಮನ ಭಕ್ತರು ಸಂತರು ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ಭಕ್ತರೆಲ್ಲ ಆಮಂತ್ರಿತರೇ. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಯ್ಕೆ ಮಾಡಲಾಗಿದೆ ಆಹ್ವಾನ ಕೊಡಲಾಗಿದೆ. ಸೀಮಿತ ಸ್ಥಳ ಇರೋದರಿಂದ ಎಲ್ಲರೂ ಭಾಗಿಯಾಗೋದು ಕಷ್ಟ ಎಂದು ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನ ಗೊಂದಲ ಬಗ್ಗೆ ಪೇಜಾವರ ಮಠಾಧೀಶ, ಟ್ರಸ್ಟಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,
ಜನವರಿ 22ರ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಜನವರಿ 15ರವರೆಗೆ ನಡೆಯಲಿದೆ. ಅಯೋದ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ ಹವನ ಸತ್ಸಂಗ, ಭಜನೆ , ಮುಂತಾದ ಕಾರ್ಯಕ್ರಮ ನಡೆಯಲಿದೆ. ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಕೂಡ ಆಯಾಯ