ಹೈಬ್ರಿಡ್ ಜಾನುವಾರುಗಳ ಹುಟ್ಟಿದ 3-4ದಿನಗಳ ಸುಮಾರು 10-12 ಗೋವಿನ ಗಂಡು ಕರುಗಳನ್ನು ಯರುಕೋಣೆ ಸಮೀಪದ ಆಲಗೆದ್ದಕೇರಿಯ ಕಲ್ಲುಕ್ವಾರಿ ಮಧ್ಯೆ ಬಿಟ್ಟು ಹೋದ ಘಟನೆ ನಡೆದಿದೆ. 2 ಕರುಗಳು ನೀರು ಆಹಾರ ಇಲ್ಲದೆ ಸತ್ತು ಹೋಗಿದೆ. ಕೆಲವು ಕರುಗಳು ಹಸಿವಿನಿಂದ ನಿತ್ರಾಣ ಗೊಂಡಿದ್ದು ಸ್ಥಳೀಯರು ನೀರು ಕುಡಿಸಿ, ಹುಲ್ಲು ನೀಡಿ ಉಪಚರಿಸಿದ್ದರು.ನಂತರ ಬೈಂದೂರು
ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ್ದರು. ಈ
ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ
ಇಡೀ ಕ್ಷೇತ್ರದ ರಾಜಕಾರಣದ ದಿಕ್ಕನ್ನು ಬದಲಾಯಿಸುವ ಶಕ್ತಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಿದೆ. ಆ ಹಿನ್ನೆಲೆಯಲ್ಲಿ ಪ್ರಣಾಳಿಕೆಯನ್ನು ಮನೆ ಮನೆಗೂ ತಲುಪಿಸುವ ಕಾರ್ಯ ವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಕೊಂಕಣ ಖಾರ್ವಿ ಸಭಾಭವನದಲ್ಲಿ ನಡೆದ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಕ್ಷದ ಬೈಂದೂರು ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು. ಬಿಜೆಪಿ ಸರ್ಕಾರ ಇವತ್ತು
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಮತ್ತು ಹೊಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಗುರುರಾಜ್ ಗಂಟಿಹೊಳೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೈಂದೂರಿನ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನಾಗಿ ಪಕ್ಷದವರು ಟಿಕೆಟ್ ನೀಡಿದ್ದಾರೆ. ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿಬೇಕೆಂದು ಹೇಳಿದರು.
ಬೈಂದೂರಿನ ಕಿರಿ ಮಂಜೇಶ್ವರದ ಶ್ರೀ ಕ್ಷೇತ್ರ ಶ್ರೀ ಅಗಸ್ತೇಶ್ವರ, ಶ್ರೀ ಮಹಾಗಣಪತಿ, ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಅಗಸ್ತೇಶ್ವರ ದೇವರ ಜೀರ್ಣಾಷ್ಟಬಂಧ, ಬ್ರಹ್ಮಕಲಶೋತ್ಸವ ಪುಷ್ಪರಥ ಸಮರ್ಪಣೆ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಏ.28ರಿಂದ ಮೇ 7ರ ವರೆಗೆ ಸಂಭ್ರಮದಿಂದ ನಡೆಯಲಿದೆ. ವಾದ್ಯಗೋಷ್ಠಿ ಚೆಂಡೆ ವಾದನ ಮೂಲಕ ಭವ್ಯ ಮೆರವಣಿಗೆ ಭಕ್ತರೊಬ್ಬರು ಕೊಡಮಾಡಿದ ನೂತನ ಪುಷ್ಪಾರಥ ಅದ್ದೂರಿಯಾಗಿ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ನಾಗೂರಿನ ಶ್ರೀ
ಕುಂದಾಪುರ: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಭಯೋತ್ಪಾದನೆಗೆ ಬೆಂಬಲ ಕೊಟ್ಟಿರುವ ಕೇಸುಗಳಿದ್ದರೆ ತೋರಿಸಬೇಕು. ಇಲ್ಲವಾದಲ್ಲಿ ಈ ಕ್ಷೇತ್ರದ ಜನರೆದುರುವ ನೀವು ಕ್ಷಮೆ ಕೇಳಬೇಕು. ನಿಮ್ಮ ಹೇಳಿಕೆಗೆ ಕೇಸು ಹಾಕಲು ಹೋಗಲ್ಲ. ತಾಯಿ ಮೂಕಾಂಬಿಕೆ ಇದ್ದಾಳೆ. ನೀವು ಹೇಳಿರುವ ಮಾತು ಸತ್ಯವೋ, ಸುಳ್ಳೋ ಅವಳೇ ನಿರ್ಧರಿಸುತ್ತಾಳೆ. ನಿಮ್ಮ ಸುಳ್ಳುಗಳು ಇಲ್ಲಿಗೆ ಕೊನೆಯಾಗಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ
ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರ ಬಿಜೆಪಿ ಕಛೇರಿಯಲ್ಲಿ ನಡೆದ
ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಗಂಗೊಳ್ಳಿ ಪಿ ಎಸ ಐ ವಿನಯ್ ,ಕೊಲ್ಲೂರ್ ಪಿಎಸ್‍ಐ ಈರಣ್ಣ ಸಿರಗುಪ್ಪಿ