ಮಂಗಳೂರಿನ ಪಣಂಬೂರು ಬೀಚಿನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಸಂಜೆಯ ವೇಳೆಗೆ ಪಣಂಬೂರು ಬೀಚಿಗೆ ಬಂದಿದ್ದು ಸಮುದ್ರಕ್ಕೆ
ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ