ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಝ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ
ಉದ್ಯಮಿಯಿಂದ ತನ್ನ ಕಾರಿನಲ್ಲಿ ಮಹಿಳಗೆ ಲೈಂಗಿಕ ಕಿರುಕುಳ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿ.ಬೈಕ್ ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ.ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ ಆರೋಪ.ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್.20 ವರ್ಷದ ವಿವಾಹಿತ
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಳ್ತಂಗಡಿ. : ತೋಟತ್ತಾಡಿ ಬಿಜೆಪಿಯ ದುರಾಡಳಿತಕ್ಕೆ ಬೇಸಿತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಹರೀಶ್ ಗೌಡ ವಿಶ್ವನಾಥ್ ಗೌಡ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಸಂಯೋಜಕರಾದ ಭಗೀರಥ ಜಿ. ಮಾಜಿ ಜಿಲ್ಲಾ ಪಂಚಾಯತ್
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್
ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ಸ್ಪರ್ಧಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಯುವ ರೈತ ಘಟಕ – ರಾಜ್ಯ ಸಂಚಾಲಕ ಮತ್ತು ಜಿಲ್ಲಾಧ್ಯಕ್ಷ – ಆದಿತ್ಯ ಕೊಲ್ಲಾಜೆ ಮತ್ತು ಅವರ ತಂಡ ಬಜಿರೆ, ಗ್ರಾಮಕ್ಕೆ ಸಹಿ ಅಭಿಯಾನ ಮತ್ತು ಜನರ ಸಮಸ್ಯೆಗಳನ್ನು ಅರಿಯಲು ನಡೆಸಿದ್ದರು. ಗ್ರಾಮಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಕಳೆದ 5 ವರ್ಷಗಳಿಂದ ಹಲವೆಡೆ ನೀರಿಲ್ಲದೆ, ಕೆಲವೆಡೆ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಇದಲ್ಲದೇ, ಇಲ್ಲಿನ ಜನರು ಹಿಂದಿನ
ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐ ಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಏಕಾಂಗಿ ಪ್ರತಿಭಟನೆಗೆ ಸೋಮವಾರ ಚಾಲನೆ ನೀಡಿದರು. ಬೆಳಿಗ್ಗೆ ಹತ್ತು ಗಂಟೆಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಆರಂಭಿಸಿದ ಅವರು ಸಂಜೆ
ಕುದುರೆಮುಖ ರಾಷ್ಟ್ರೀಯ ಅರಣ್ಯ ಮೀಸಲು ಪ್ರದೇಶದಲ್ಲಿನ ಮಲೆಕುಡಿಯ ಆದಿವಾಸಿಗಳು 100 ವರ್ಷಕ್ಕೂ ಹೆಚ್ಚು, ಈ ಕಾಡಿನಲ್ಲಿ ಪ್ರಸ್ತುತ ಜೀವನ ಪರಿಸ್ಥಿತಿಯನ್ನು ತಿಳಿಯಲು ಅನ್ವೇಷಣೆಗಾಗಿ ಬೆಳ್ತಂಗಡಿ ತಾಲೂಕಿನ ಮಲೆಕುಡಿಯ ಬುಡಕಟ್ಟು ಗ್ರಾಮ ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ ನೀಡಿತ್ತು. ಮಲಿಕುಡಿಯ ಆದಿವಾಸಿಗಳು ಈ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತವು ಅವರ ಮೂಲಭೂತ ಹಕ್ಕುಗಳಾದ ವಿದ್ಯುತ್, ನೀರಾವರಿ
ಚುನಾವಣೆ ಬಂದಾಗ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುತ್ತಾರೆ ಎಂದು ಹೇಳಿದ ಕಾಂಗ್ರೆಸ್ ನಾಯಕರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.ಕಳೆದ ನಾಲ್ಕೂವರೆ ವರ್ಷದ ಹಿಂದೆ ಇಲ್ಲಿನ ನಾಯಕರೊಬ್ಬರು ತಾಲೂಕಿನ ಹಲವಾರು ಕಡೆ ತೆಂಗಿನ ಕಾಯಿ ಒಡೆದು ಜನರನ್ನು ಮರುಳು ಮಾಡಿದ ಹಾಗೆ ನಾವು ಮಾಡಲಿಲ್ಲ. ಇಡೀ ತಾಲೂಕಿನಲ್ಲಿ ಅಭಿವೃದ್ದಿ ಮಾಡುವ ಮೂಲಕ ನಮ್ಮ ಪ್ರಣಾಳಿಕೆಯಲ್ಲಿ ಏನು ಹೇಳಿದ್ದೇವೆಯೋ ಅದನ್ನು ಚಾಚೂ ತಪ್ಪದೇ