ಬೆಂಗಳೂರಿನ ಹಸಿರು ತೋಟದ ಗ್ರೀನ್ ಪಾತ್ ಏರಿನಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನಾದ ಬ್ರಹ್ಮ, ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿ, ಕಾಲವು ಅಳಿಸಲಾಗದ ಹೆಸರು ಶಕ್ತಿಯುತ
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಂಕಷ್ಟ ಉಂಟಾಗಿರುವ ವಿಚಾರ ಹಾಗೂ ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ತೋಟಗಾರಿಕಾ ಸಚಿವರಾದ ಶ್ರೀ ಎಸ್ ಎಸ್
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.
ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ
ರಾಜ್ಯದ ಪ್ರಮುಖ ಭಾಷೆಯಾದ ತುಳುವಿಗೆ ಹೆಚ್ಚುವರಿ ರಾಜ್ಯಭಾಷೆಯಾಗಿ ಮಾನ್ಯತೆ ನೀಡಲು ಪ್ರಯತ್ನಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ಆರಂಭಗೊಂಡಿರುವ ‘ಬೆಂಗಳೂರು ಕಂಬಳನಮ್ಮ ಕಂಬಳ’ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುರಾತನ ಕಾಲದಿಂದ ಬಂದಿರುವ ಕಂಬಳವು ಕರಾವಳಿಯ ಜಾನಪದ ಕಲೆ. ಅದು ಬೆಂಗಳೂರಿನಲ್ಲಿ ಯಾಕೆ ಎಂದು ಪ್ರಶ್ನಿಸಿದರು. ಕರಾವಳಿಯ ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಗಾಗಿ ಈ
ಬೆಂಗಳೂರು : ಭಾರತೀಯ ಕಂಪೆನಿ ಕಾರ್ಯದರ್ಶಿಗಳ ಸಂಸ್ಥೆಯಿಂದ ಕಂಪೆನಿಗಳ ವ್ಯಾಜ್ಯ ಇತ್ಯರ್ಥಕ್ಕಾಗಿ ಬೆಂಗಳೂರಿನಲ್ಲಿ “ಮಧ್ಯಸ್ಥಿಕೆ ಕೇಂದ್ರ” ತೆರೆಯಲು ನಿರ್ಧರಿಸಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಪ್ ಕಂಪೆನಿ ಸೆಕ್ರೆಟರೀಸ್ ನ ನೂತನ ಅಧ್ಯಕ್ಷ ಸಿಎಸ್ ಮನೀಶ್ ಗುಪ್ತಾ ಹೇಳಿದ್ದಾರೆ. ಬೆಂಗಳೂರಿನ ಐಸಿಎಸ್ಐ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್ ನಲ್ಲಿ
























