Home Posts tagged bengaluru

ಕ.ಸಾ.ಪಗೆ ಒಂದು ಸಾವಿರ ಕೋಟಿ ರೂ ಶಾಶ್ವತ ನಿಧಿ ಸ್ಥಾಪನೆ ತಮ್ಮ ಗುರಿ ; ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ

ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ

ಚೆಲುವಿನ ಚುಲುಬುಲೀಸ್ ಮಹಿಳೆಯರಿಂದ ದಾಂಡಿಯಾ ಸಂಭ್ರಮ

ಕೊರೊನಾ ಕಾರಣದಿಂದಾಗಿ ಅದೆಷ್ಟೋ ಮಂದಿ ಕಳೆದ ಎರಡು ವರ್ಷಗಳಿಂದ ಮನೆಯ ಹೊರಗಿನ ಆಯೋಜನೆಯ ಸಾಂಸ್ಕøತಿಕ ಕಾರ್ಯಕ್ರಮ , ಸಂಭ್ರಮದಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಸನ್ನಿವೇಶವು ಸಹಜ ಸ್ಥಿತಿಗೆ ಬರುತ್ತಿದ್ದು, ಸಾಂಸ್ಕøತಿಕ ಕಲರವ ಸಂಭ್ರಮ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ ಚೆಲುವಿನ ಚುಲುಬುಲೀಸ್ ಮಹಿಳಾ ತಂಡದವರು ಖ್ಯಾತ ಡಿಸೈನರ್ ಹಾಗೂ ಮೋಡೆಲ್ ಪ್ರಿಯಾ ಕುಮಾರ್ ನೇತೃತ್ವದಲ್ಲಿ ದಾಂಡಿಯಾ ನೃತ್ಯ ಆಯೋಜನೆಯ ಮೂಲಕ ನವರಾತ್ರಿಯವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ : ಮುಖ್ಯಮಂತ್ರಿಗೆ ಮಡಿವಾಳ ಕ್ಷೇಮಾಭಿವೃದ‍್ಧಿ ಸಂಘ ಮನವಿ

ಬೆಂಗಳೂರು:  ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ದೀಪಕ್ ವಿ. ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮಡಿವಾಳ ಜನಾಂಗ ನಡೆಸಿದ ಬಹು ದಿನಗಳ ಹೋರಾಟದ ಫಲವಾಗಿ ನಿಗಮ

ಜಾತಿವಾರು ಜನಗಣತಿ ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‌ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.

ಅವೈಜ್ಞಾನಿಕ ರಸ್ತೆ ಕಾಮಗಾರಿ : ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು – ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನಪಾ ವಿಪಕ್ಷ ನಾಯಕ ವಿನಯ ರಾಜ್ ಆರೋಪಿಸಿದ್ದಾರೆ.   ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿರಿದಾದ ಆ ರಸ್ತೆಯನ್ನು ಅಗಲೀಕರಿಸುವ ಕುರಿತಂತೆ ಹಿಂದಿನ ಶಾಸಕ