Home Posts tagged #bjp

ಬೈಂದೂರಿನಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು. ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು, ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ ಉದ್ಘಾಟಿಸಿ, ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಸಂಸತ್‌ಗೆ ಕಳುಹಿಸುವ ಕೆಲಸ ನಿಮ್ಮದು

ಬೈಂದೂರು : ನಾರಿ ಶಕ್ತಿ ಮಹಿಳಾ ಸಮಾವೇಶ

ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಲ್ಲಿ ಶೇಕಡಾ 50% ಮೀಸಲಾತಿ ನೀಡುವುದರ ಮೂಲಕ ಮಹಿಳೆಯರ ಪರ

ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ : ಗುರ್ಮೆ ಸುರೇಶ್ ಶೆಟ್ಟಿ

ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ

ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ

ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ : ಪೂರ್ವಭಾವಿ ಸಭೆ

ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮುಖಂಡರಾದ ಮುರಳೀಧರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಮೊದಲಾದವರು ಇದ್ದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ಪುತ್ತೂರು‌ : ಏ.9ರಂದು ಮಹಿಳಾ ಮೋರ್ಚಾದ ವತಿಯಿಂದ ನಡೆಯಲಿರು‌ವ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ

ಪುತ್ತೂರು‌ : ಏ.9ರಂದು ಪುತ್ತೂರು‌ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್‌ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ‌ ಸಂಜೀವ ಮಠಂದೂರು ಸಹಿತ‌ ಮಹಿಳಾ

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,

ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್‌ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ