Home Posts tagged #bjp (Page 2)

ಪ್ರಚಂಡ ಬಹುಮತದಿಂದ ಬಿ. ವೈ ರಾಘವೇಂದ್ರ ಗೆಲುವು ನಿಶ್ಚಿತ : ಶಾಸಕ ಗುರುರಾಜ್ ಗಂಟಿಹೊಳೆ ವಿಶ್ವಾಸ

ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ

ಮಂಗಳೂರು: ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ನಮ್ಮ ಜಿಲ್ಲೆಯಿಂದ ನರೇಂದ್ರ ಮೋದಿಯಂತಹ ವಿಶ್ವ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸಭೆ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು ಉದ್ಘಾಟನೆ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ

ಪುತ್ತೂರು: ಬಿಜೆಪಿಯಿಂದ ಗ್ರಾಮ ಚಲೋ ಕಾರ್ಯಾಗಾರ

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದೆ ಗೆಲ್ಲುತ್ತೇವೆ. ಮರಳಿ ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩ ಲಕ್ಷಕ್ಕೂ ಅಂಕ ಮತಗಳಿಂದ ಜಯ ಗಳಿಸುವುದು ನಿಶ್ಚಿತ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ ಸಾಧ್ಯವಾಗುತ್ತದೆ ಎಂಬ ನಂಬಿಕೆಯಿದೆ ಎಂದರು. ಬಳಿಕ ಮಾತಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್. ವೈ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ ಘೋಷಣಾ ಪತ್ರವನ್ನು ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯರವರು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ

ಬಿಜೆಪಿಯನ್ನು ರಾಷ್ಟ್ರಮಟ್ಟಕ್ಕೇರಿಸಿದ ನಾಯಕ ಎಲ್. ಕೆ. ಅಡ್ವಾಣಿಯವರಿಗೆ ಭಾರತ ರತ್ನ

ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ ಮಂದಿರ ಹೋರಾಟದ ಮುಖ್ಯ ರೂವಾರಿಯಾಗಿದ್ದರು ಅಡ್ವಾಣಿ. 1977ರ ಜನತಾ ಸರಕಾರದಲ್ಲಿ ಮತ್ತು ವಾಜಪೇಯಿಯವರ ಸಂಪುಟದಲ್ಲಿ ಅಡ್ವಾಣಿಯವರು ಸಚಿವರಾಗಿದ್ದರು; ಉಪ ಪ್ರಧಾನಿ ಆಗಿದ್ದರು. ಆಗ ಮುಂದಿನ ಪ್ರಧಾನಿ ಅಡ್ವಾಣಿಯವರು ಎಂದು

ಕಲ್ಲಡ್ಕ : ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ

ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.ಬಿಜೆಪಿಯಲ್ಲಿ ಶಾಸಕ, ಮಂತ್ರಿ,

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ