Home Posts tagged #bjp (Page 24)

ಕೇಂದ್ರದಲ್ಲಿರುವುದು ಹೃದಯಹೀನ ಸಂವೇದನಾ ರಹಿತ ಸರಕಾರ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ

ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್

ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ

ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿ

ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ಶ್ರೀ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು

ಕಾಂಗ್ರೆಸ್ ವಿರೋಧ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ: ಪುತ್ತೂರಿನಲ್ಲಿ ನಳಿನ್ ಕುಮಾರ್ 

ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೇಸ್ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದ್ದು, ಈ ಪ್ರತಿಭಟನೆಯ ವಿರುದ್ಧ ನಳಿನ್

ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಹೈಕಮಾಂಡ್ ನನಗೆ ಸಹಮತ ಕೊಟ್ಟು ನಾನೊಬ್ಬ

ಲಸಿಕೆ ವಿಚಾರದಲ್ಲಿ ಅವ್ಯವಹಾರ ನಡೆಸುವ ದೌರ್ಭಾಗ್ಯ ಬಿಜೆಪಿಗೆ ಬಂದಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್

 ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ

50 ಲಕ್ಷ ಅಭಿವೃದ್ಧಿ ಕಾಮಗಾರಿ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲು ದಕ್ಷಿಣ 15 ನೇ ವಾರ್ಡಿನ ಗಾಂಧಿನಗರ 2 ನೇ ಅಡ್ಡರಸ್ತೆ ಅಗಲಿಕರಣ ಮತ್ತು ಚರಂಡಿ ರಚನೆಯ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು  ನಡೆಸಿದರು. ಶಾಸಕ ಡಾ.ಭರತ್ ಶೆಟ್ಟಿಯವರ ವಿಶೇಷ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಶಾಸಕರೊಂದಿಗೆ ಉಪಮೇಯರ್