Home Posts tagged #bjp (Page 7)

ಯತ್ನಾಳ್ ಪುತ್ತೂರು ಅಸ್ಪತ್ರೆ ಭೇಟಿ ಸಂದರ್ಭ – ಅಜಿತ್ ರೈ ಹೊಸಮನೆಯನ್ನು ಹೊರದೂಡಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು

ಸುಳ್ಯ: ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಹೊಳೆ ನೀರಿಗೆ ಬಿದ್ದು ಮೃತ್ಯು

ಬಿಜೆಪಿ ಮುಖಂಡ ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ ಎಂದು ಹೇಳಲಾಗಿದೆ. ಪಯಸ್ವಿನಿ ನದಿಗೆ ಅಳವಡಿಸಲಾದ ತನ್ನ ತೋಟಕ್ಕೆ ನೀರು ಸರಬರಾಜುಮಾಡುವ ಪಂಪ್‌ನ ಪುಟ್ ವಾಲ್

ಕಾಂಗ್ರೆಸ್ ಕಾರ್ಯಕರ್ತರು ನೀಚ ಕೃತ್ಯಕ್ಮೆ ಕೈ ಹಾಕುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು

ಡಿವಿಎಸ್, ನಳಿನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ ,ಪುತ್ತೂರು ಠಾಣೆಯಲ್ಲಿ ದೂರು

ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೆÇಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ

ಶಾಸಕ ಸುನಿಲ್ ಕುಮಾರ್ ಬೆದರಿಕೆ ಖಂಡಿಸುತ್ತೇನೆ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್

ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರರಾದ

ಸಕಲೇಶಪುರ : ಶಾಸಕ ಸಿಮೆಂಟ್ ಮಂಜುಗೆ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ

ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.

ಬೆಳ್ತಂಗಡಿ : ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಹಲ್ಲೆ

ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ ತುಂಬಿದರು. ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್

ಈ ಬಾರಿಯ ಚುನಾವಣೆ ನಮಗೆ ಪಾಠ ಕಲಿಸಿದೆ : ಮಾಜಿ ಸಚಿವ ಸುನಿಲ್ ಕುಮಾರ್

ಕಾರ್ಕಳ, ಸಜ್ಜನಿಕೆಗೆ ಬೆಲೆಕೊಟ್ಟವರು ನಾವು ಅಭಿವೃದ್ಧಿ ಮಾಡಿ ಎಲ್ಲವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆಂದು ಎಂದು ಕೊಂಡೆವು. ಆದರೆ ಅದು ಒಳ್ಳೇದಲ್ಲ ಎನ್ನುವುದು ಚುನಾವಣೆ ನಮಗೆ ಪಾಠ ಕಲಿಸಿದೆ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಬಿಜೆಪಿ ಕಾರ್ಕಳ ವತಿಯಿಂದ ನಗರದ ಬಂಡಿ ಮಠದಲ್ಲಿ ನಡೆದ ಕ್ಷೇತ್ರ ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ, ಅವರು ಮಾತನಾಡಿದರು. ನಾನು ಚಿಕ್ಕವನಿರುವಾಗಲೇ ಹೋರಾಟ

ಬಿಜೆಪಿಗೆ ಹೀನಾಯ ಸೋಲು : ನಳಿನ್, ಡಿವಿಎಸ್ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು

ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿ ಕೇರಳ ಸ್ಟೋರಿ ವೀಕ್ಷಿಸಿದ ಡಾ. ಭರತ್ ಶೆಟ್ಟಿ ವೈ

ಮಂಗಳೂರು: ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಬಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ ಕೇರಳ ಸ್ಟೋರಿ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮವಾಗಿದೆ.ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ ನಂಬಿಕೆಗಳ ಮೇಲೆ ಯಾವ ರೀತಿ ಮುಸ್ಲಿಂ ಭಯೋತ್ಪಾದಕರು,ಮುಸ್ಲಿಂ ವತಿಯವಾದಿ ಸಂಘಟನೆಗಳು, ಮುಸ್ಲಿಂ ಮತಾಂದರು