Home Posts tagged #boat

ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ

ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ

ಶಿರೂರು: ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ

10 ದಿನದೊಳಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರ ಪರವಾಗಿ ಬೃಹತ್ ಹೋರಾಟ : ಯು.ಟಿ. ಖಾದರ್

ಮೀನುಗಾರ ಮುಖಂಡರ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ತಿಂಗಳಿಗೆ 300 ಲೀಟರ್ ಸೀಮೆಎಣ್ಣೆಯನ್ನು ಉಚಿತವಾಗಿ ವಿತರಿಸಲು ಆರಂಭಿಸಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಸೀಮೆಎಣ್ಣೆ ಸರಿಯಾಗಿ ವಿತರಣೆ ಆಗುತ್ತಿಲ್ಲ. ಕಳೆದ 10 ತಿಂಗಳಿನಿಂದ ಒಂದೇ ಒಂದು ಲೀಟರ್ ಸೀಮೆಎಣ್ಣೆ ಸಿಕ್ಕಿಲ್ಲ ಎಂದವರು ಹೇಳಿದರು. ಇತ್ತೀಚೆಗೆ ಸೀಮೆಎಣ್ಣೆ ಬಿಡುಗಡೆಗಾಗಿ ಮೀನುಗಾರರು

ಕುಂದಾಪುರದ ನೆರೆಪೀಡಿತ ಪ್ರದೇಶಗಳಿಗೆ ದೋಣಿ ವ್ಯವಸ್ಥೆ..!

ಕುಂದಾಪುರದ ಬೈಂದೂರು ತಾಲೂಕು ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು ಹೇರೂರು ಗ್ರಾಮ ಪಂಚಾಯಿತಿಗಳಿಗೆ ದೋಣಿಯನ್ನು ಜಿಲ್ಲಾಡಳಿತದಿಂದ ಹಸ್ತಾಂತರಿಸಿದ್ರು. ಕುಂದಾಪುರದ ಬೈಂದೂರು ತಾಲೂಕಿನ ಪ್ರದೇಶದಲ್ಲಿ  5 ಕಡೆಗಳಲ್ಲಿ ಪ್ರಾಕೃತಿವಿಕೋಪದಿಂದ ಸಾಕಷ್ಟು ತೊಂದರೆ ಆಗಿದ್ದು, ಅಲ್ಲಿನ ಸಮಸ್ಯೆಗಳ ಕುರಿತು ವಿ೪ನ್ಯೂಸ್ ವಿಸ್ಕೃತವಾಗಿ ವರದಿ ಮಾಡಿತ್ತು. ಈ ವರದಿಗೆ ಎಚ್ಚೆತ್ತುಕೊಂಡು, ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು