Home Posts tagged #bus accident

ಕೊಲ್ಲೂರು: ಚರಂಡಿಗೆ ಉರುಳಿದ ಖಾಸಗಿ ಬಸ್‌. ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗಾಯ

ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ. ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ

ವಿಟ್ಲ: ಖಾಸಗಿ ಬಸ್ ಹಾಗೂ ಪಿಕಪ್ ವಾಹನ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ ಬಸ್‌ನಲ್ಲೂ ಹಲವು ಪ್ರಯಾಣಿಕರಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಕುಂದಾಪುರ|| ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 20 ಮಂದಿ ಪ್ರಯಾಣಿಕರಿಗೆ ಗಾಯ

ಕುಂದಾಪುರ: ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ಚಾಲಕ ನಿಯಂತ್ರಣ ತಪ್ಪಿ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಪಕ್ಕದ ರಸ್ತೆಗೆ ಉರುಳಿದ ಘಟನೆ ನಡೆದಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಪ್ರಯಾಣಿಕರನ್ನು ಹೊತ್ತ ಬಸ್ ರಾಷ್ಟ್ರೀಯ

ಮೂಡುಬಿದಿರೆ|| ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ-ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್‍ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ : ಹೆಜಮಾಡಿಯ ರಾ.ಹೆ 66ರಲ್ಲಿ ಘಟನೆ

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ