ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್‌ನಲ್ಲಿ
ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ ಬಸ್‌ನಲ್ಲೂ ಹಲವು ಪ್ರಯಾಣಿಕರಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಉಡುಪಿ : ಶ್ವಾನ ಅಂದ್ರೆ ಎಲ್ರಿಗೂ ಇಷ್ಟ. ಅದರ ನಿಷ್ಠೆ ಮತ್ತು ಪ್ರೀತಿಯೂ ಪ್ರಶ್ನಾತೀತ. ಉಡುಪಿ ನಗರದ ಆಸುಪಾಸಿನಲ್ಲಿ ನಡೆದ ಶ್ವಾನನಿಷ್ಠೆಯ ಪ್ರಸಂಗವೊಂದು, ಶ್ವಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ತನ್ನನ್ನು ಆರೈಕೆ ಮಾಡುವ ಮನೆ ಕೆಲಸದಾಕೆಯ ಜೊತೆಯಲ್ಲಿ ಈ ಶ್ವಾನ ಕೂಡ ಬಸ್ಸನ್ನೇರಿದೆ. ಈ ಮಹಿಳೆ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಾರೆ. ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನವೂ ಬಂದಿದೆ.ಆಕೆ ಬಸ್ ಹತ್ತುವಾಗ ಶ್ವಾನವೂ ಹತ್ತಿದೆ. ಬಸ್
ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರಯಾಣಿಕರು ಬಸ್ಸಿನ ಕಿಟಕಿ ಗಾಜುಗಳನ್ನು
ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ
ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಬಸ್ ಮಾಲಕರು ಸರ್ಕಾರದ ಜೊತೆ ಮಾತುಕತೆ ನಂತರ ಇಂದಿನಿಂದ ತಮ್ಮ ಸಂಚಾರ ಆರಂಭಿಸಿಲು