ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ
ಬೈಂದೂರು: ಬೈಂದೂರು ತಾಲೂಕಿನಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿ ಕೊಂಡು ವಾಸವಾಗಿರುವ 20 ಫಲಾನುಭವಿಗಳಿಗೆ ಶಾಸಕ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಜನವರಿ 16ರಂದು ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ ವಿತರಿಸಿದರು.ನಂತರ ಮಾತನಾಡಿದ ಶಾಸಕರು, ವಾಸ್ತವ್ಯದ ಹಕ್ಕು ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸವಾಗಿದ್ದರೂ ಕೂಡ ಹಕ್ಕು ಪತ್ರ ಇಲ್ಲದೇ ಸರಕಾರದ ಯಾವುದೇ ಸೌಲಭ್ಯ ಪಡೆಯದೇ ಇರುವ
ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ
ಬೈಂದೂರು : ಅಕ್ರಮ- ಸಕ್ರಮ ( ಬಗರ್ ಹುಕುಂ ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಅರ್ಜಿ ತಿರಸ್ಕರಿಸುವುದು ಅಥವಾ ವಿಲೇವಾರಿ ಮಾಡುವಂತಿಲ್ಲ. ಸಮಿತಿಯ ಮುಂದೆ ತಂದು ಅಕ್ರಮ-ಸಕ್ರಮಕ್ಕೆ ಸಮಿತಿಯ ಸೂಚನೆಯಂತೆ ನಿರ್ಧರಿಸಬೇಕು.ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಲ್ಲಿ ಬಹುದೊಡ್ಡ ಹೋರಾಟ ರೂಪಿಸಬೇಕಾಗುತ್ತದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಎಚ್ಚರಿಕೆ ನೀಡಿದ್ದಾರೆ.ಕಾಡಿನಂಚಿನ ಗ್ರಾಮಗಳಲ್ಲಿ ಕಳೆದ ಅನೇಕ ವರ್ಷದಿಂದ
ಬೈಂದೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ ಪ್ರತಿಭಟಿಸುವವರ ವಿರುದ್ಧ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮಲೆನಾಡು ಜನ
ಬೈಂದೂರು : ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನಾಗೂರಿನಲ್ಲಿ ವಿನೂತನ ಕನ್ನಡ ಹಬ್ಬ ಭಾನುವಾರು ನಾಗೂರು ಕೃಷ್ಣ ಲಲಿತಾ ಕಲಾಮಂದಿರದಲ್ಲಿ ನಡೆಯಿತು. ಕಿರಿಮಂಜೇಶ್ವರ ಗ್ರಾ ಪಂ ಅಧ್ಯಕ್ಷ ಶೇಖರ ಖಾರ್ವಿ ಕನ್ನಡ ಹಬ್ಬ 2024ರ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡಿ, ನಮ್ಮ ಭಾಷೆ, ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯ ಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ಬೆಳವಣಿಗೆ ಮಾಡಿಕೊಳ್ಳಬೇಕು. ಕನ್ನಡ ಭಾಷೆ ತನ್ನದೇ ಆದ ಇತಿಹಾಸ ಮತ್ತು ಶ್ರೇಷ್ಠತೆಯನ್ನು
ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಹಾರಾಷ್ಟ್ರ ಹಾಗೂ ಕರ್ನಾಟಕ ವತಿಯಿಂದ ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಧರ್ಮಶ್ರೀ ರಿಲೀಫ್ ಫೌಂಡೇಶನ್ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಸ್ಥೆ ವತಿಯಿಂದ ಇಂದು ಬೈಂದೂರು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿದ ತಂಗುದಾಣವನ್ನು ಕೊಂಕಣ ರೈಲ್ವೆಯ ತರಬೇತಿ ಮತ್ತು ಅಭಿವೃದ್ಧಿ ವ್ಯವಸ್ಥಾಪಕ ಶ್ರೀಧರ ಅವಭ್ರತ್ ಹಾಗೂ ಸೀನಿಯರ್ ರೀಜನಲ್ ಟ್ರಾಫಿಕ್ ಮ್ಯಾನೇಜರ್ ದೀಪಕ್
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ
ಮೊಟ್ಟ ಮೊದಲ ಬಾರಿಗೆ ಕರಾವಳಿಯ ಯುವಕರ ತಂಡ ಹೊಸತನದ ಆಯಾಮವನ್ನು ಸೃಷ್ಟಿ ಮಾಡಲು ನೈಜ್ಯ ಆಧಾರಿತ ಕಥೆಯನ್ನು ವೆಬ್ ಸೀರೀಸ್ ಮೂಲಕ ಹೇಳಲು ಹೊರಟಿದೆ. ದೀಪಾವಳಿಯ ಪ್ರಯುಕ್ತ ಇದರ ಪಸ್ಟ್ ಲುಕ್ ಪೋಸ್ಟರ್ ಅನ್ನು ಇಂದು ನಟ – ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಬಿಡುಗಡೆ ಮಾಡಿ ಯುವಕರ ತಂಡಕ್ಕೆ ಶುಭ ಹಾರೈಸಿದ್ದಾರೆ. ಕರಾವಳಿ ಭಾಗದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಎಂದೇ ಪ್ರಖ್ಯಾತಿಯಾದ ಲಕ್ಕಿ ನಾಗೇಶ್ ಚೊಚ್ಚಲ ನಿರ್ದೇಶನದ ಕರ್ಮ ವೆಬ್ ಸೀರೀಸ್ ಇದಾಗಿದೆ. ಇದರ
ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ 60ರ ಸಂಭ್ರಮದ ರಂಗಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಅದ್ದೂರಿಯಿಂದ ಜರಗಿತು. ಕೊಡುಗೆ ದಾನಿ ಯಶಸ್ವಿ ಉದ್ಯಮಿ ಹೇರಂಜಾಲು ಜಯಶೀಲ ಶೆಟ್ಟಿ ಅವರು ರಂಗಮಂದಿರಕ್ಕೆ ಅಡಿಗಲ್ಲು ಹಾಕುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಸರಕಾರಿ ಶಾಲೆಗಳ ಉಳಿವಿಕೆಗೆ ಹಳೆ ವಿದ್ಯಾರ್ಥಿಗಳ ಸಹಭಾಗಿತ್ವವು ಪ್ರಮುಖವಾದದ್ದು. ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಸಂಕಲ್ಪ ನಮ್ಮಿಂದಾಗಬೇಕು ಎಂದರು. 60 ಸಂಭ್ರಮದ