Home Posts tagged #citu

ಕಾರ್ಮಿಕ ಚಳುವಳಿಯ ಧ್ರುವತಾರೆ CITU ಗೆ 53 ವರ್ಷಗಳ ಸಂಭ್ರಮ

ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ CITUಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) CITU ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ CITU ನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣಗೈದ CITU ದ. ಕ.

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳವನ್ನು ಖಂಡಿಸಿ ಪ್ರತಿಭಟನಾ ಪ್ರದರ್ಶನ

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯನ್ನು ಖಂಡಿಸಿ,BJP ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು BJP ಹರ್ಯಾಣ ಮಂತ್ರಿ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ದೆಹಲಿಯಲ್ಲಿ ನಡೆಯುತ್ತಿರುವ ಮಹಿಳಾ ಕ್ರೀಡಾಪಟುಗಳ ನ್ಯಾಯಯುತ ಹೋರಾಟವನ್ನು ಬೆಂಬಲಿಸಿ ದೇಶದ ರೈತ

 ಭರತ್ ಶೆಟ್ಟಿ ವೈಫಲ್ಯಕ್ಕೆ ಗುರುಪುರ ಹೋಬಳಿ ಬಲಿಯಾಗಿದೆ : ಮುನೀರ್ ಕಾಟಿಪಳ್ಳ ಆರೋಪ

ಮಂಗಳೂರು ನಗರ ಉತ್ತರ ಕ್ಷೇತ್ರದ ಗ್ರಾಮೀಣ ಭಾಗವಾಗಿರುವ ಗುರುಪುರ ಹೋಬಳಿ ಭರತ್ ಶೆಟ್ಟಿ ಶಾಸಕರಾದ ಮೇಲೆ ಅಭಿವೃದ್ದಿ ಕಾರ್ಯದಲ್ಲಿ ಪೂರ್ತಿ ಹಿಂದೆ ಬಿದ್ದಿದೆ. ಹೊಸದಾಗಿ ಸರಕಾರಿ ಶಾಲೆ, ಕಾಲೇಜು ತೆರೆಯಲು, ಆಸ್ಪತ್ರೆ ಸ್ಥಾಪಿಸಲು ಶಾಸಕ ಭರತ್ ಶೆಟ್ಟರಿಂದ ಸಾಧ್ಯವಾಗಲಿಲ್ಲ. ಗುರುಪರ ಬ್ಲಾಕ್ ವ್ಯಾಪ್ತಿಯಲ್ಲಿರುವ ಎರಡು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಬಿದ್ದಿರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗಲಿ, ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು

ಪೌರ ಕಾರ್ಮಿಕರ ಬೇಡಿಕೆ ಹಾಗೂ ತ್ಯಾಜ್ಯ ವಿಲೇವಾರಿ ಕೂಡಲೇ ಮಾಡದಿದ್ದಲ್ಲಿ ಶಾಸಕರ ಮನೆಯೆದುರು ತ್ಯಾಜ್ಯ ಸುರಿದು ಪ್ರತಿಭಟನೆ – ಬಿ ಕೆ ಇಮ್ತಿಯಾಜ್

ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ,ಡಬ್ಬಲ್ ಇಂಜಿನ್ ಸರಕಾರವೆಂದು ಬೀಗುತ್ತಿರುವ BJP ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದೆ.ನಗರ ಪಟ್ಟಣ ಪ್ರದೇಶದ ಸುಂದರೀಕರಣ ಹಾಗೂ ಸ್ವಚ್ಛತೆಗಾಗಿ ತನ್ನ ಸರ್ವಸ್ವವನ್ನೂ ಮುಡಿಪಾಗಿಟ್ಟ ಪೌರ ಕಾರ್ಮಿಕರ ಉತ್ತಮ ಬದುಕಿಗಾಗಿ ಎಳ್ಳಷ್ಟೂ ಕಾಳಜಿ ವಹಿಸದ ರಾಜ್ಯ ಸರಕಾರ

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಿದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಪ್ರದರ್ಶನ

 ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳದ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಆಗ್ರಹಿಸಿ ಹಾಗೂ ಕಾರ್ಮಿಕರ ಶೋಷಣೆಗೆ ಹಾಗೂ ಬಂಡವಾಳಗಾರರ ಲಾಭ ಹೆಚ್ಚಳಕ್ಕೆ ಅವಕಾಶ ನೀಡಿದ ರಾಜ್ಯದ BJP ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆಯ ಕರೆಯ ಮೇರೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ CITU ಹಾಗೂ INTUC ಜಂಟಿ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಹೆಜ್ಜೆ ಹೆಜ್ಜೆಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ

ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ – ಎಸ್ ವರಲಕ್ಷ್ಮಿ

ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ಧಾರೆ ಎರೆದು, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ ಕಾರ್ಮಿಕ ವರ್ಗವನ್ನೇ ಇನ್ನಿಲ್ಲವಾಗಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ. ದೇಶದ ಕಾರ್ಮಿಕ