Home Posts tagged #congress protest

ಕಾಂಗ್ರೆಸ್‍ನಿಂದ ಬಟ್ಟಲು ಬಡಿದು ಪ್ರತಿಭಟನೆ 

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಟ್ಟಲು ಬಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕಾರ್ಕಳದಲ್ಲಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದು, ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಕಾರ್ಕಳ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ಫುಲ್ ಕೆರಿ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಸುಶಾಂತ್ ಸುಧಾಕರ್, ಜನವಿರೋಧಿ ರೈತ ವಿರೋಧಿ ಸರ್ಕಾರದ ಆಡಳಿತದಿಂದ ಜನಸಾಮಾನ್ಯ ರು ಕಂಗಾಲಾಗಿದ್ದಾರೆ. ನಿರಂತರ ಬೆಲೆಯೇರಿಕೆಯಿಂದ, ನಿರುದ್ಯೋಗದ ಸಮಸ್ಯೆಯಿಂದ

ಸೆ. 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಣೆ: ಯುವ ಜನರ ಆಕ್ರೋಶ ಪ್ರಧಾನಿವರೆಗೆ ಮುಟ್ಟಿಸುತ್ತೇವೆ – ರಕ್ಷಾ ರಾಮಯ್ಯ

ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದ್ದು, ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಸೆಪ್ಟೆಂಬರ್ 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ

 ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಎತ್ತಿನ ಬಂಡಿ ಆಂದೋಲನ

ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಆಗಿರುವ ತೊಂದರೆ ಕುರಿತು ಸಾಂಕೇತಿಕವಾಗಿ ಪ್ರತಿಭಟನೆ ವ್ಯಕ್ತಪಡಿಸಲು ಕಾಂಗ್ರೆಸ್ ನಾಯಕರು

ಕೇಂದ್ರದ ಸರ್ಕಾರದ ಖಾಸಗೀಕರಣ ಯೋಜನೆ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್‌ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.   ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೋದಿ ನೇತೃತ್ವದ ಸರಕಾರವು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಲೇ ಇದೆ. ಇದರ ವಿರುದ್ಧ ಯುವ ಜನತೆ ಸೆಟೆದು ನಿಲ್ಲಬೇಕಿದೆ. ಯುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಿದೆ ಎಂದರು.

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠ ನಾಯಕ

ಶಾಲಾ ಮಕ್ಕಳ ಮೊಟ್ಟೆ ಡೀಲ್ ಪ್ರಕರಣ : ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ

ಬಿ.ಸಿ. ರೋಡ್‌ ನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಂಟ್ವಾಳ: ತೈಲ, ಗ್ಯಾಸ್ ಹಾಗೂ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥ ಹಾಗೂ ಪ್ರತಿಭಟನಾ ಮೆರವಣಿಗೆ ಬಂಟ್ವಾಳದಲ್ಲಿ ನಡೆಯಿತು. ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಬಡ್ಡಕಟ್ಟೆಯಲ್ಲಿ ಹನುಮಾನ್ ದೇವಸ್ಥಾನದ ಬಳಿ ಚಾಲನೆ ನೀಡಿದರು. ಬಳಿಕ ಬಿ.ಸಿ.ರೋಡಿನ ಮೇಲ್ಸೆತುವೆಯ ಕೆಳಭಾಗದಲ್ಲಿ ಸಂಪನ್ನಗೊಂಡ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಭಾವನಾತ್ಮಕ ವಿಚಾರ ಎತ್ತಿ

ಮಂಗಳೂರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಮಂಗಳೂರು ಪಾಲಿಕೆಯ ವಿಪಕ್ಷ ಸದಸ್ಯ

ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ 100 ನಾಟೌಟ್ ಪ್ರತಿಭಟನೆ

ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ಧ 1೦೦ ನಾಟೌಟ್ ಪ್ರತಿಭಟನೆ ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಅವರು ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿರುವ ನಡುವೆಯೂ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ