Home Posts tagged #congress (Page 16)

ಸರ್ಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದೆ : ಯು.ಟಿ. ಖಾದರ್

ರಾಜ್ಯದ ಸಂಸದರ ಮೌನ, ಸರಕಾರದ ಅಸಹಾಯಕತೆ, ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಜನತೆ ಸಾಲದ ಹೊರೆಯಲ್ಲಿ ಹೊತ್ತುಕೊಳ್ಳುವಂತಾಗಿದೆ. ರಾಜ್ಯ ಸರಕಾರ ಮಂಡಿಸಿದ್ದು ಸುಲಿಗೆ, ಸಾಲದ ಬಜೆಟ್ ಆಗಿದೆ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಯ ಉಸಿರೆಳೆಯುತ್ತಿರುವ

ಕಾಂಗ್ರೆಸ್ ಕಾರ್ಯಕರ್ತರಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ : ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರ ಪುನರುಚ್ಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಮುದ್ರಾಡಿ, ಡಿ ಆರ್ ರಾಜು, ಸುರೇಂದ್ರ ಶೆಟ್ಟಿ ಪುನರುಚ್ಚರಿಸಿದ್ದಾರೆ. ಕಾರ್ಕಳ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ರಿ ಬ್ಲಾಕ್

ಅಶ್ವತ್ಥ್ ನಾರಾಯಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ : ಐವನ್ ಡಿಸೋಜ

ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು

ಫೆ.5ರಿಂದ 9ರ ವರೆಗೆ ಕರಾವಳಿಯಲ್ಲಿ ಪ್ರಜಾಧ್ವನಿ ಯಾತ್ರೆ

ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆ ಫೆ.5ರಂದು ಸುಳ್ಯದಿಂದ ಆರಂಭಗೊಂಡು ಫೆ.6ರಂದು ಮೂಡಬಿದಿರೆ, ಫೆ.7ರಂದು ಕಾಪು, ಫೆ.8ರಂದು ಕುಂದಾಪುರ, ಫೆ.9ರಂದು ಶೃಂಗೇರಿ ತಲುಪಲಿದೆ ಎಂದರು.

ಕುರುಡು ಮಲೈನಲ್ಲಿ ಜ.3 ರಿಂದ ಡಿ.ಕೆ. ಶಿವಕುಮಾರ್ ಅವರ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆ : ಪೂರ್ವ ಸಿದ್ಧತಾ ಸಭೆ ನಡೆಸಿದ ಮಾಜಿ ಸಚಿವ ಎಂ.ಆರ್. ಸೀತಾರಾಂ

ಬೆಂಗಳೂರು, ಜ, 30; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದ ಕುರುಡು ಮಲೈನಲ್ಲಿ ಫೆ. 3 ರಿಂದ ಆರಂಭಿಸಲಿರುವ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆಯ ಯಶಸ್ಸಿಗಾಗಿ ಮಾಜಿ ಸಚಿವ ಎಂ.ಆರ್. ಸೀತಾರಾಂ ಇಂದು ಪೂರ್ವಭಾವಿ ಸಭೆ ನಡೆಸಿದರು. ಎಂ.ಅರ್. ಸೀತಾರಾಂ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ಡಿ.ಕೆ. ಶಿವಕುಮಾರ್ ಅವರು ನೇಮಿಸಿದ್ದು, ಈ ಹಿನ್ನೆಲೆಯಲ್ಲಿ ಅವರು “ಪ್ರಜಾಧ್ವನಿ”

ಶರಣ್ ಪಂಪ್ ವೆಲ್ ನನ್ನು ಗಡಿ ಪಾರು ಮಾಡುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದಲ್ಲಿ ಮನವಿ

ಭಾಷಣ ಮಾಡಿದ ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. “ದ.ಕ. ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮುಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ ಪ್ರಚೋದನೆ ನೀಡುವ ಭಾಷಣಗಳು ಮಾಧ್ಯಮದ ಮುಖಾಂತರ ವೈರಲ್ ಆಗುತ್ತಾ ಇದೆ. ಇದು ತೀರಾ ಆತಂಕಕಾರಿ

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಭಾರತ್ ಜೋಡೊ ಯಾತ್ರೆ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಅಂದು

ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ

ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ  ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ ಸೆಕ್ರೆಟರಿಗಳಾದ ಹುಸೈನ್ , ಜಿ.ಎ.ಬಾವಾ, ಟಿ.ಕೆ ಸುಧೀರ್, ಡಾ.ಅಭಿಲಾಷ್ ಕೂಡ ಭೇಟಿ ನೀಡಿದ್ದು, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಜ.22ರಂದು ಪುತ್ತೂರಿನಲ್ಲಿ ಕಾಂಗ್ರೆಸ್‍ನಿಂದ ಜನಧ್ವನಿ ಕಾರ್ಯಕ್ರಮ

ಪುತ್ತೂರು: ಮಂಗಳೂರಿನಲ್ಲಿ ಜ.22ರಂದು ಸಾಯಂಕಾಲ 4 ಗಂಟೆಗೆ ನಡೆಯುವ ಜನಧ್ವನಿ ಕಾರ್ಯಕ್ರಮದಲ್ಲಿ ಒಟ್ಟು 50ಸಾವಿರ ಮಂದಿ ಸೇರುವ ನಿರೀಕ್ಷೆಯನ್ನು ಇಟ್ಟಿಕೊಳ್ಳಲಾಗಿದೆ. ಪ್ರತಿ ಬೂತ್ ಮಟ್ಟದಿಂದ 20 ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 5ಸಾವಿರ ಜನರು ಭಾಗವಹಿಸಲಿದ್ದಾರೆ. ಪಕ್ಷಕ್ಕೆ ಬದ್ದವಾಗಿ ಬರುವವರನ್ನು ಸ್ವಾಗತ ಮಾಡುತ್ತೇವೆ ಮತ್ತು ನಾವು ಪಕ್ಷದ ಚಿಹ್ನೆಯ ಕೆಳಗೆ ಕೆಲಸಮಾಡುತ್ತೇವೆ ಎಂದು ಪುತ್ತೂರು

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಶಾಸಕ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ