Home Posts tagged #congress (Page 18)

ಮಂಗಳೂರು ದಕ್ಷಿಣ: ಕಾಂಗ್ರೆಸ್ ಟಿಕೆಟ್‍ಗಾಗಿ ವಿಶ್ವಾಸ್ ಕುಮಾರ್ ದಾಸ್ ಅರ್ಜಿ ಸಲ್ಲಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಒತ್ತಾಸೆಯಂತೆ ನಾನು ಅರ್ಜಿ ಸಲ್ಲಿಸಿದ್ದೇನೆ.

ಡೀಮ್ಡ್ ಫಾರೆಸ್ಟ್ ಸಮಸ್ಯೆ ಇತ್ಯರ್ಥವಾಗದೆ ಹಕ್ಕು ಪತ್ರ ನೀಡುವುದು ಎಷ್ಟು ಸರಿ : ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಪ್ರಶ್ನೆ

ಡೀಮ್ಸ್ ಫಾರೇಸ್ಟ್ ಸಮಸ್ಯೆಯನ್ನು ಪರಿಹರಿಸಿ ಹಕ್ಕು ಪತ್ರವನ್ನು ವಿತರಿಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು. ಆದರೆ ಇತ್ತೀಚಿನ ವರದಿ ಪ್ರಕಾರ ಸುಪ್ರೀಂ ಕೋರ್ಟಿನ ಹಸಿರು ನ್ಯಾಯ ಪೀಠದ ತೀರ್ಪೆ ಅಂತಿಮ. ಸರಕಾರ ಸಲ್ಲಿಸಿರುವ ಅಫಿದಾವಿತ್ ತಿರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‍ನಲ್ಲಿ ಸಮಸ್ಯೆ ಇತ್ಯರ್ಥವಾಗದೆ ಇರುವಾಗ ಹಕ್ಕು ಪತ್ರ ನೀಡುವುದು ಎಷ್ಟು ಸರಿ? ಎಂದು ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರು

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಪ್ರತಿಭಟನೆ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕದ್ರಿ ಕೆಪಿಟಿ ಬಳಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲಾಧ್ಯಕ್ಷ ಲಾರೆನ್ಸ್ ಡಿಸೋಜ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಅಂದು ಅಪರಾಹ್ನ 3 ಗಂಟೆಗೆ ನಗರದ ಕೂಳೂರಿನ ಕೆಐಒಸಿಎಲ್ ಮುಂಭಾಗದಲ್ಲಿ ಈ ಜನಾಗ್ರಹ ಸಭೆ ನಡೆಯಲಿದೆ ಎಂದರು.ಘಟಕದ

ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ರಕ್ಷಾ ರಾಮಯ್ಯ : ಆಂಧ್ರಪ್ರದೇಶದಲ್ಲಿ ಭಾರತ ಐಕ್ಯತಾ ಯಾತ್ರೆಗೆ ವ್ಯಾಪಕ ಸಿದ್ಧತೆ

ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ‍್ರ ಪ್ರದೇಶ ಉಸ್ತುವಾರಿ ರಕ್ಷಾ ರಾಮಯ್ಯ ಹೆಜ್ಜೆ ಹಾಕಿದರು. ಗುಂಡ್ಲುಪೇಟೆಯಿಂದ ಶುಕ್ರವಾರದಿಂದ ಪ್ರಾರಂಭವಾಗಿರುವ ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ಪಡೆಯೊಂದಿಗೆ ರಕ್ಷಾ ರಾಮಯ್ಯ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಕ್ಷಾ

ದ.ಕ. ಜಿಲ್ಲಾ ಕಾಂಗ್ರೆಸ್‍ : ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ

ದ.ಕ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ ಗುರು ಸಂದೇಶ ಯಾತ್ರೆಗೆ ಮಂಗಳೂರಲ್ಲಿ ಚಾಲನೆ ಸಿಕ್ಕಿತು.ವಿಧಾನ ಪರಿಷತ್ ವಿಪಕ್ಷನಾಯಕ ಬಿ.ಕೆ. ಹರಿಪ್ರಸಾದ್ ಚಾಲನೆ ನೀಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ 168ನೆ ಜನ್ಮ ಜಯಂತಿ ಆಚರಣೆಯ ನಿಮಿತ್ತ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದವರೆಗಿನ

ಆ.23 : ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ

ತೊಕ್ಕೊಟ್ಟಿನಲ್ಲಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಬಳಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ವಿದ್ಯಾ ಎಂ. ಕಾಳೆ, ತಹಶೀಲ್ದಾರ ಟಿ.ಜಿ. ಗುರುಪ್ರಸಾದ್ಉಳ್ಳಾಲ ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ ಕೆ, ಮೈಸೂರು ಇಂಡಸ್ಟ್ರೀಸ್ ಲಿಮಿಟೆಡ್‍ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಉಳ್ಳಾಲ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್, ಮಾಜಿ

ಗೂಂಡಾಗಿರಿಗೆ ಬಜರಂಗದಳವನ್ನು ಸರ್ಕಾರವೇ ಕಳುಹಿಸಿದ್ದೆ..? : ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿಕೆ

ಹೊಟೇಲ್‍ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗ ಮತ್ತೆ ಬಿಜೆಪಿ ಸರಕಾರ ಇರುವಾಗ ಚುನಾವಣೆ