Home Posts tagged #congress (Page 19)

ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಪ್ಪು ಮಾಹಿತಿ ನೀಡಿದ ಸಚಿವರು ಕ್ಷಮೆ ಯಾಚಿಸಬೇಕು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿಕೆ

ಹತ್ತನೆ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟಿಲ್ಲ ಎಂದು ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಹೇಳಿಕೆ ನೀಡಿದ ಸಚಿವ ರಾದ ಸುನಿಲ್ ಕುಮಾರ್, ಕೋಟ ಶ್ರೀ ನಿವಾಸ ಪೂಜಾರಿ ಸಾರ್ವಜನಿಕ ರಲ್ಲಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಮಿಥುನ್ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ

ಮಂಗಳೂರು ಮುಳುಗಲು ನಗರಪಾಲಿಕೆಯೇ ಕಾರಣ” : ಮಾಜಿ ಶಾಸಕ ಮೊಯಿದೀನ್ ಬಾವಾ

“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು

ಪ್ರಮಾಣ ಪತ್ರ ಸ್ವೀಕರಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು

ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್

ರಾಜ್ಯ ‌ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳಾಗಿ ಚಂದ್ರಕಲಾ ರಾವ್ , ಮಲ್ಲಿಕಾ ಪಕ್ಕಳ, ಜಾಯಿರಾ ಜುಬೈರ್ ನೇಮಕ

ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸಲಿ : ಯು.ಟಿ. ಖಾದರ್

ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಬೇಕು. ಜನರನ್ನು ಗೊಂದಲ ಸೃಷ್ಠಿಸುವ ಬದಲು

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸುತ್ತಿದ್ದು, ಇಂದು ಅವರು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ನಿಧನ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.ಶ್ರೀಯುತರು ಸುಮಾರು 18 ವರ್ಷಗಳ ಕಾಲ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮತ್ತು ಸುಮಾರು 30 ವರ್ಷಗಳ ಕಾಲ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ದ. ಕ. ಜಿಲ್ಲಾ

ಕೃಷಿ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ : ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ