Home Posts tagged #congress (Page 22)

ದೇವಸ್ಥಾನ ತೆರವು: ನಾಟಕ ನಿಲ್ಲಿಸಿ ಬಿಜೆಪಿ ಸರ್ಕಾರ ಜನರಲ್ಲಿ ಕ್ಷಮೆ ಯಾಚಿಸಬೇಕು: ಹರೀಶ್ ಕುಮಾರ್

ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಧರ್ಮದ ರಕ್ಷಕರು, ಹಿಂದೂ ರಕ್ಷಕರು, ಹಿಂದೂಗಳನ್ನು ಗುತ್ತಿಗೆಗೆ

ಆಸ್ಕರ್ ಫೆರ್ನಾಂಡಿಸ್‌ಗೆ ಸಂತಾಪ ಸೂಚಿಸಿದ ಗೋಪಾಲ ಪೂಜಾರಿ

ನನಗೆ ರಾಜಕೀಯದಲ್ಲಿ ಪುನರ್ಜನ್ಮ ನೀಡಿದ ಮಹಾನ್ ನಾಯಕ ಅಗಲಿದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಉಡುಪಿ, ದ.ಕ ಜಿಲ್ಲೆಗೆ ಆಸ್ಕರ್ ಫೆರ್ನಾಂಡಿಸ್ ಅವರ ಕೊಡುಗೆ ಅಪಾರ. ನಾನು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರು. ಜಿಲ್ಲೆಯಲ್ಲಿ ಸಾಕಷ್ಟು ನಾಯಕರನ್ನು ಹುಟ್ಟುಹಾಕುವ ಕೆಲಸ ಮಾಡಿದ್ದಾರೆ. ಅಜಾತಶತ್ರು ಆಸ್ಕರಣ್ಣನ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ

ಆಸ್ಕರ್ ಫೆರ್ನಾಂಡಿಸ್ ವಿಧಿವಶ: ಉಡುಪಿಯ ಶೋಕಮಾತಾ ಚರ್ಚ್‌ನಲ್ಲಿ ಬಲಿಪೂಜೆ

ಹಿರಿಯ ಕಾಂಗ್ರೆಸ್ ಮುಖಂಡ ಅಸ್ಕರ್ ಫೆರ್ನಾಂಡೀಸ್ ರವರಿಗೆ ಉಡುಪಿಯ. ಶೋಕಾ ಮಾತಾ ಚರ್ಚ್ ನಲ್ಲಿ ಬಲಿ ಪೂಜೆ ಹಾಗೂ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಅಗಲಿದ ಅಸ್ಕರ್ ಫೆರ್ನಾಂಡೀಸ್‌ರ ಮೃತ ದೇಹವನ್ನು ಸಕಲ ಗೌರವಗಳೊಂದಿಗೆ ಉಡುಪಿಗೆ ಚರ್ಚ್‌ಗೆ ವಿಶೇಷ ವಾಹನದಲ್ಲಿ ತರಲಾಗಿತ್ತು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಶಾಸಕ ಯುಟಿ ಖಾದರ್ ಐವನ್ ಡಿಸೋಜಾ, ಜೆ ಅರ್

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಗಣ್ಯರಿಂದ ಸಂತಾಪ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ವಿಧಿವಶ

ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಲಬುರಗಿ ಪಾಲಿಕೆಯ ಮೇಯರ್ ಆಗ್ತಾರೆ: ಶಾಸಕ ಖಾದರ್ ವಿಶ್ವಾಸ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ

ವಿಟ್ಲ ವ್ಯಾಪ್ತಿಯಲ್ಲಿ ಹಾದುಹೋಗಲಿರುವ 400ಕೆವಿ ವಿದ್ಯುತ್: ಕೃಷಿಕರಿಗೆ ತೊಂದರೆ

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದರು. ಬಂಟ್ವಾಳ ತಾಲೂಕಿನಲ್ಲಿ ಅಗಾಧ ಪ್ರಮಾಣದಲ್ಲಿ ರೈತರಿಗೆ

ರಾಜ್ಯಾದ್ಯಂತ ತಾಂಡವಾಡುತ್ತಿದೆ ಭ್ರಷ್ಟಾಚಾರ: ಮುರಳೀಧರ ರೈ ಮಠಂತಬೆಟ್ಟು ಆರೋಪ

ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ ದೋಷಗಳನ್ನು ಹೇಳಿ ಭಾವನಾತ್ಮಕವಾಗಿ ಜನರನ್ನು ಸೆಳೆದು ಮತಗಳಿಸಿ ಉನ್ನತ ಅಧಿಕಾರಕ್ಕೇರಿದ್ದರೂ ಜನರ

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ : ಮೂಡುಬಿದರೆಯಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್