Home Posts tagged #congress (Page 3)

ಪ್ರಗತಿ ಹಿನ್ನಡೆಯ ಸಂಕೇತ: ಕೆ. ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್

ಕೇಂದ್ರ ಬಜೆಟ್ ನಿರಾಶಾದಾಯಕ : ಬಿ.ರಮನಾಥ ರೈ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ ರೂಪಾಯಿ. ಆರಂಭದ ಜೂನ್ ತಿಂಗಳಿನಲ್ಲಿ 20,87,658 ಇದ್ದ ಟಿಕೆಟ್ ನೀಡಿಕೆ ಹೆಚ್ಚುತ್ತ ಬಂದಿದ್ದು ಜನವರಿ ತಿಂಗಳಲ್ಲಿ ತಿಂಗಳು ಮುಗಿಯುವುದಕ್ಕೆ ಮೊದಲೆ 26,96,261ತಲುಪಿದೆ.

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಜನತಾ ದರ್ಶನ

ಉಡುಪಿ: ರಾಮನ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಸಚಿವ ಶಿವರಾಜ್ ತಂಗಡಗಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ

ಅವ ಬಿಡ ಇವ ಕೊಡ

ಬಿಜೆಪಿಯ ಮಾಜೀ ಶಾಸಕ ಗೂಳಿಹಟ್ಟಿ ಶೇಖರ್ ಅವರು ನಾಗಪುರದ ಸಂಘ ಕೇಂದ್ರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂದು ನನಗೆ ಪ್ರವೇಶ ಕೊಡಲಿಲ್ಲ ಎಂದು ದೂರಿದ್ದಾರೆ. ಅದೇ ಸಮಯದಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಹೆಚ್ಚು ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿರುವುದು ವರದಿಯಾಗಿದೆ. ಇವೆಲ್ಲ ಒಳ ವೈರುಧ್ಯದ ವಿಷಯಗಳು. ಇದಕ್ಕೆ ಸಂವಾದಿಯಾಗಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಮತ್ತು ದಲಿತರ ಮೇಲೆ ಹಲ್ಲೆ ಹೆಚ್ಚಾಗಿರುವುದಾಗಿಯೂ ವರದಿಯಾಗಿದೆ. ಅದಕ್ಕೆ

ಗುಜರಾತ್ ಸೂಕ್ತ ಸರಕಾರ ಆಗಿರಲಿಲ್ಲ ಏಕೆ?

ಬಿಲ್ಕಿಸ್ ಬಾನೊ ಅತ್ಯಾಚಾರದ ಸಂಬಂಧ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 11 ಜನರ ಬಿಡುಗಡೆಗೆ ಗುಜರಾತ್ ಸೂಕ್ತ ಸರಕಾರ ಆಗಿರಲಿಲ್ಲ. ಕಪಟತನ, ನ್ಯಾಯ ವಂಚನೆ ಮೂಲಕ ಅವರನ್ನು ಗುಜರಾತ್ ಸರಕಾರ ಬಿಡಿಸಿಕೊಂಡಿದೆ ಮತ್ತೆ ಅವರು ಕೂಡಲೆ ಜೈಲಿಗೆ ಹೋಗಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪು ನ್ಯಾಯಾಂಗದ ಗೌರವ ಹೆಚ್ಚಿಸಿದೆ. ಗುಜರಾತ್ ಸರಕಾರದ ಮುಖವಾಡ ಕಳಚಿದೆ. 2002ರಲ್ಲಿ ಗುಜರಾತಿನಲ್ಲಿ ನಡೆದ ಅಮಾನವೀಯ ಧಾರ್ಮಿಕ ಕೊಲೆ, ಸುಲಿಗೆ, ಹಲ್ಲೆ, ದರೋಡೆ,

ಮಂಗಳೂರು: ಕರ್ನಾಟಕ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ಸವಾದ್ ಸುಳ್ಯ

ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಎಂ. ಸಿ ಸುಧಾಕರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ ಉಪನಾಯಕನಾಗಿ ಆಯ್ಕೆಗೊಂಡಿದ್ದು, 10

ವೈಎಸ್‌ಆರ್ ಸಂಸ್ಥಾಪಕಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆ

ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದಲ್ಲದೆ ತಮ್ಮ ಪಕ್ಷವನ್ನು ಕಾಂಗ್ರೆಸ್ಸಿನಲ್ಲಿ

ಬೆಳಗಾವಿ ; ಬಕೆಟ್ ಜನತಾ ಪಾರ್ಟಿ ಬಿಜೆಪಿ – ಕಾಂಗ್ರೆಸ್ ಪಕ್ಷದಿಂದ ಲೇವಡಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯ ವಿಶ್ವನಾಥ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಅಶೋಕ್‍ರನ್ನು ಬಕೆಟ್ ಹಿಡಿದುಕೊಂಡೇ ರಾಜಕೀಯ ಮಾಡುವವರು ಎಂದು ಟೀಕಿಸಿರುವುದು ಬಿಜೆಪಿಯ ಬಕೆಟ್ ರಾಜಕೀಯವನ್ನು ಬಹಿರಂಗಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಗೇಲಿ ಮಾಡಿದೆ. ಬಿಜೆಪಿಯ ಎಸ್. ಆರ್. ವಿಶ್ವನಾಥ್ ಹೇಳಿಕೆಯನ್ನು ಪ್ರಸ್ತಾಪಿಸಿ, ಅಶೋಕ್ ಅವರೆ ಪ್ರತಿಪಕ್ಷದ ನಾಯಕ ಸ್ಥಾನ ಹಿಡಿಯಲು ಯಾರಿಗೆ ಬಕೆಟ್ ಹಿಡಿದಿರಿ