Home Posts tagged #CPIM (Page 2)

ಜನರ ಬದುಕಿನ ಪ್ರಶ್ನೆ ಗೆಲ್ಲಬೇಕಾದರೆ ಬಿಜೆಪಿಯನ್ನು ಸೋಲಿಸಿ- ಸಂತೋಷ್ ಬಜಾಲ್

ರಾಜ್ಯದ ಅಧಿಕಾರ ಚುಕ್ಕಾಣಿಯಲ್ಲಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆ, ಮತೀಯ ವಿಭಜನೆಯಂತಹ ರಾಜಕಾರಣದಲ್ಲಿ ಜನರ ಬದುಕಿನ ಪ್ರಶ್ನೆಯನ್ನು ಕಡೆಗಣಿಸಿದಲ್ಲದೆ ಸೋಲಿಸುತ್ತಾ ಬಂದಿದೆ. ಈ ರಾಜ್ಯದ ಜನರ ಬದುಕಿನ ಪ್ರಮುಖ ವಿಚಾರಗಳಾದ ಉದ್ಯೋಗ, ಆರೋಗ್ಯ, ಶಿಕ್ಷಣದಂತಹ ಬಹುಮುಖ್ಯ ಪ್ರಶ್ನೆಗಳು

ಶಾಸಕರ ಮಾನಹಾನಿ ಪ್ರಕರಣ ಸಮಗ್ರ ತನಿಖೆಯಾಗಲಿ – CPIM ಒತ್ತಾಯ

ಶಾಸಕ ವೇದವ್ಯಾಸ ಕಾಮತ್ ರವರು ತನ್ನ ಮಾನಹಾನಿಕರ ಸುದ್ದಿ ಪ್ರಕಟವಾಗದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸಮಗ್ರ ತನಖೆಯಾಗಬೇಕು.ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಮಾನಹಾನಿ ಆಗುವಂತಹ ವಿಚಾರದ ಬಗ್ಗೆ ಕನಿಷ್ಟ ದೂರನ್ನು ಕೊಡದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಶಾಸಕರ ಸಚ್ಚಾರಿತ್ಯದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು,ಈ ಬಗ್ಗೆ ಕೂಡಲೇ ಶಾಸಕ ವೇದವ್ಯಾಸ ಕಾಮತರು ಸ್ಪಷ್ಟನೆ ನೀಡಬೇಕು ಎಂದು CPIM ದ.ಕ. ಜಿಲ್ಲಾ

ಸರ್ವಾಧಿಕಾರಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕರೆ- ಸುನೀಲ್ ಕುಮಾರ್ ಬಜಾಲ್

ಅನೈತಿಕ ದಾರಿಯಲ್ಲಿ ಕರ್ನಾಟಕದ ಜನಮತಗಣನೆಯನ್ನು ಧಿಕ್ಕರಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕುದುರೆ ವ್ಯಾಪಾರ ನಡೆಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷದ ಆಡಳಿತದಲ್ಲಿ ಸಂಪೂರ್ಣ ಜನವಿರೋಧಿ ಸರಕಾರ ಆಗಿತ್ತು. ಇದು 40% ಕಮಿಷನ್ ವ್ಯವಹಾರವನ್ನು ಕಾನೂನು ಬದ್ದಗೊಳಿಸಿ ಎಲ್ಲಾ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಸರಕಾರವಾಗಿದೆ. ಸರಕಾರದ ಎಲ್ಲಾ ಯಂತ್ರಗಳನ್ನು ದುರುಪಯೋಗಪಡಿಸಿದ್ದಲ್ಲದೆ ಕೋಮುವಾದಿಕರಣಗೊಳಿಸಿ ಕೋಮುಗಲಭೆಗಳಿಗೆ ರಾಜಕೀಯ ಬೇಳೆ

ಅಡುಗೆ ಅನಿಲ ಬೆಲೆಯೇರಿಕೆ ವಿರೋಧಿಸಿ ಸಿಪಿಐಎಂ ಪ್ರತಿಭಟನೆ

ಅಡುಗೆ ಅನಿಲ ಬೆಲೆಗಳನ್ನು ಅತ್ಯಂತ ಕ್ರೂರವಾಗಿ ಏರಿಕೆ ಮಾಡಿದ ಕೇಂದ್ರ ಸರಕಾರದ ಕೆಟ್ಟ ನಿರ್ಧಾರದ ವಿರುದ್ಧ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಇಂದು (2-3-2023) ನಗರದ ಕ್ಲಾಕ್ ಟವರ್ ಬಳಿ ಅಡುಗೆ ಖಾಲಿ ಅಡುಗೆ ಅನಿಲ ಸಿಲಿಂಡರ್ ಪ್ರದರ್ಶಿಸಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.  ಪ್ರತಿಭಟನೆಯ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡುತ್ತಾ ಬಿಜೆಪಿ ಸರಕಾರ ಗ್ಯಾಸ್ ದರ ಏರಿಕೆ

ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

ಮಂಗಳೂರು, ಅ. 17: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು ಸಿಪಿಐಎಂ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ಇಂದು 17-10-2022 ನಗರದ ಮಿನಿವಿಧಾನ ಸೌಧದ ಮುಂಭಾಗ ಸಮಾನ ಮನಸ್ಕ ಸಂಘಟನೆಗಳಿಂದ ಪೊಲೀಸರ ಕ್ರಮವನ್ನು ಖಂಡಿಸಿ , ನ್ಯಾಯಯುತ ಹೋರಾಟವನ್ನು

ಮೂಡುಬಿದರೆ : ಸಿಪಿಐಎಂ ವತಿಯಿಂದ ಜನವಿರೋಧಿ, ದೇಶವಿರೋಧಿ ಆಡಳಿತ ವಿರೋಧಿಸಿ ಆಂದೋಲನ

ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು

ರಸ್ತೆ ಬದಿಯ ಬೀದಿ ಬದಿಯ ಅಂಗಡಿಗಳ ತೆರವು : ಬೆಳ್ತಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಬಿ. ಎಂ.ಭಟ್ ಮಾತನಾಡಿ ಕಾನೂನು ಹಾಗೂ ಸಂವಿಧಾನ ವಿರೋಧಿಸಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ pwd ಇಲಾಖೆ

ಗುರುಪುರ ಕೈಕಂಬದಲ್ಲಿ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶ

ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು

ಕೋಡಿಕಲ್ ನಾಗನಕಟ್ಟೆಗೆ ಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂನಿಂದ ಮನವಿ

ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನಿಯೋಗದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಸಿಪಿಐಎಂ ಮಂಗಳೂರೂ ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್,ಉತ್ತರ ಕಾರ್ಯದರ್ಶಿ ಬಶೀರ್ ಪಂಜಿಮೊಗರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಸಿಪಿಐಎಂ

ಸಾವರ್ಕರ್ ವಿಜೃಂಭಣೆಯ ಹಿಂದೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆಮಾಚುವ ಹುನ್ನಾರ : ಮುನೀರ್ ಕಾಟಿಪಳ್ಳ ಆರೋಪ

ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆ ಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು ಸಿಪಿಐಎಂ ‌ದ.ಕ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು. ಅವರು ನಗರದ ಬಜಾಲ್ ನ ಭಗತ್ ಸಿಂಗ್ ಭವನದಲ್ಲಿ ಜರುಗಿದ 23ನೇ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.