ಮಂಗಳೂರು: ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ
ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಂಟ್ರಾಕ್ಟ್ ಬೇಸ್‌ನಲ್ಲಿ ಚಾಲಕರನ್ನು ನೇಮಕ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್‌ಗಳು ಹೆಚ್ಚು ಸಂಚಾರ ನಡೆಸುತ್ತವೆ. ಇದೀಗ ಆ ಬಸ್
ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ. ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು,
ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ ಅಡಿಕೆ ಗೋಣಿ ಚೀಲಗಳ ಪೈಕಿ 5 ಗೋಣಿ ಚೀಲ ಅಡಿಕೆಯನ್ನು ದಿನಾಂಕ 14.03.2024 ರಂದು ಸಂಜೆ 7:00 ಗಂಟೆಯಿಂದ ದಿನಾಂಕ 15.03.2024 ರಂದು ಬಳಿಗ್ಗೆ 6:00 ಗಂಟೆಯ ಮಧ್ಯೆ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು ಉದ್ಘಾಟನೆ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ
ಮಾರ್ಚ್ 1ರಿಂದ 3 ರವರೆಗೆ ನಡೆಯುವ ಜಾನಪದ ಕಡಲೊತ್ಸವ -2024 ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ 14 ಮಂದಿ ವಿವಿಧ ಕ್ಷೇತ್ರದ ಜನಪದ ಕಲಾವಿದರು, ದೈವನರ್ತಕರು, ಜನಪದ ಸಂಘಟಕರು ಹಾಗೂ ನಾಟಿ ವೈದ್ಯರುಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರ್ಚ್ 2 ಮತ್ತು 3 ರಂದು ಸಂಜೆ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಈ ಕೆಳಗಿನಂತಿದೆ.
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ಈ ನೇಮಕಾತಿ ಮಾಡಿದ್ದಾರೆ.ಕರ್ನಾಟಕ ತುಳು
ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‍ಎನ್‍ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್
ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ