Home Posts tagged #dasara

ಹಾಸನ: ಕಾಡಾನೆ ಸೆರೆಗೆ ಆಪರೇಷನ್ ಆರಂಭ

ಹಾಸನ ಜಿಲ್ಲೆಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಆಪರೇಷನ್ ಆರಂಭವಾಗಿದೆ. 8 ಸಾಕು ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡಿಸೆಂಬರ್ 4ರಂದು ಕಾಡಾನೆ ಕಾರ್ಯಾಚರಣೆ ವೇಳೆ ಬಲಿಯಾಗಿದ್ದ ದಸರಾ ಆನೆ ಅರ್ಜುನ ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಲು ಜನರು ಒತ್ತಾಯಿಸಿದ್ದಾರೆ. ಇಂದಿನಿಂದ ಅಭಿಮನ್ಯ ನೇತೃತ್ವದಲ್ಲಿ ಕಾರ್ಯಾಚರಣೆಯ ನಡೆಯಲಿದೆ.

ಪುತ್ತೂರು: ಅ.15ರಿಂದ 26ರ ವರೆಗೆ ದಸರಾ ಮಹೋತ್ಸವ

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ `ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ

ಮೈಸೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.

ಕೊಂಡೆವೂರು ಮಠದಲ್ಲಿ ಸಂಭ್ರಮದ ಶರನ್ನವರಾತ್ರಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವಾಹ್ನ 10.30ರಿಂದ ಕೊಂಡೆವೂರಿನ ಕು.ಗಾಯತ್ರೀ ಮತ್ತು ಬಳಗದವರಿಂದ ಸಂಗೀತ

ಮೂಡುಬಿದಿರೆ : ದಸರಾ ಅಮೃತ ಮಹೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ.) ವತಿಯಿಂದ ಸಮಾಜ ಮಂದಿರದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಲಾಪಗಳೊಂದಿಗೆ ನಡೆಯಲಿರುವ 75ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾನು ಇಂದು ಏನಾಗಿದ್ದೇನೆ ಅದು ಸಾಹಿತ್ಯ ಇರಬಹುದು ಸಾಂಸ್ಕೃತಿಕ ವ್ಯಕ್ತಿ ಇರಬಹುದು ಅಥವಾ ರಾಜಕೀಯದಲ್ಲಿ ಒಂದು ಸ್ಥಾನ ಪಡೆಯಲು ಗಂಗಾಮೂಲ ಯಾವುದೆಂದರೆ ಅದು ಈ ಸಮಾಜ ಮಂದಿರ ಸಭಾ ಮತ್ತು ಸರಸ್ವತಿ

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ

ಚೆಲುವಿನ ಚುಲುಬುಲೀಸ್ ಮಹಿಳೆಯರಿಂದ ದಾಂಡಿಯಾ ಸಂಭ್ರಮ

ಕೊರೊನಾ ಕಾರಣದಿಂದಾಗಿ ಅದೆಷ್ಟೋ ಮಂದಿ ಕಳೆದ ಎರಡು ವರ್ಷಗಳಿಂದ ಮನೆಯ ಹೊರಗಿನ ಆಯೋಜನೆಯ ಸಾಂಸ್ಕøತಿಕ ಕಾರ್ಯಕ್ರಮ , ಸಂಭ್ರಮದಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಸನ್ನಿವೇಶವು ಸಹಜ ಸ್ಥಿತಿಗೆ ಬರುತ್ತಿದ್ದು, ಸಾಂಸ್ಕøತಿಕ ಕಲರವ ಸಂಭ್ರಮ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ ಚೆಲುವಿನ ಚುಲುಬುಲೀಸ್ ಮಹಿಳಾ ತಂಡದವರು ಖ್ಯಾತ ಡಿಸೈನರ್ ಹಾಗೂ ಮೋಡೆಲ್ ಪ್ರಿಯಾ ಕುಮಾರ್ ನೇತೃತ್ವದಲ್ಲಿ ದಾಂಡಿಯಾ ನೃತ್ಯ ಆಯೋಜನೆಯ ಮೂಲಕ ನವರಾತ್ರಿಯವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು

ಭರದ ಸಿದ್ಧತೆಯಲ್ಲಿ ಸಾಂಪ್ರದಾಯಿಕ ಮಂಗಳೂರು ದಸರಾ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ

ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ