Home Posts tagged #death news

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ

ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಂಗಳೂರು : ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ ನಿಧನ

ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು .ದಶಕಗಳ ಕಾಲದ ಹಿಂದೆ ಪ್ರಾಥಮಿಕ ನವೋದಯ ಕಲಾವೃoದದಲ್ಲಿ ಮಸಣಕ್ಕೆ, ತರಂಗ ತರಂಗ ಅಂತರಂಗ, ಹೆಗಲಿಗೆ

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ ವಿವಿಧ ಜೈನ ಧಾರ್ಮಿಕ ಆರಾಧನೆಗಳಲ್ಲಿ ಪುರೋಹಿತರಾಗಿ ಪಾಲ್ಗೊಂಡಿದ್ದರು.ಜೈನ ಧಾರ್ಮಿಕ ಆರಾಧನಾ

ಉಳ್ಳಾಲ: ನಾಟೆಕಲ್ ಬೈಕ್ ಅಪಘಾತ – ಬೈಕ್‌ನಲ್ಲಿದ್ದ ಇಬ್ಬರು ಮೃತ್ಯು

ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು

ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ

ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನ ದಾರುಣ ಅಂತ್ಯ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು, ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ವಯರ್ ನ್ನು ವಿಚ್ಚೆದಿಸಿ, ಕೂಡಲೇ ಉಪ್ಪಳದ ಖಾಸಗಿ

ಮೂಡುಬಿದಿರೆ : ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರಭಾವತಿ ಆಚಾರ್ಯ ನಿಧನ

ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ ಮನೆ ಮನೆಗೆ ಮಾಹಿತಿ ನೀಡುವ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಆನೆಗುಡ್ಡೆ ಚರ್ಚ್ ನಲ್ಲಿ ನಡೆದ

ಉಳ್ಳಾಲ: ಬೈಕ್ ಢಿಕ್ಕಿ- ಪಾದಚಾರಿ ಬೇಕರಿ ಮಾಲೀಕ ಸಾವು

ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ ದೇವಿಪುರದ ರಥೋತ್ಸವ ಇದ್ದ ಹಿನ್ನಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ