ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.ಈ ಬಳಿಕ
ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಇಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.ಶ್ರೀಯುತರು ಬಿಲ್ಲವ ಸಮಾಜ ಸೇವಾ ಸಂಘ(ರಿ)
ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ. ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ ತಮ್ಮ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದ ಶಿವಪ್ರಸಾದ್, ಅತಿಯಾಗಿ ಮದ್ಯ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ನಿನ್ನೆ ತಡರಾತ್ರಿ ಮದ್ಯ
ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್ ಮಂಜೇಶ್ವರ ತಂಡದ ಬಹು ಬೇಡಿಕೆಯ ಕಲಾವಿದರಾದ ಇವರು ತುಳು ಕನ್ನಡ ರಂಗಭೂಮಿಯ ಮೂಲಕ ತನ್ನ ಅಭಿನಯ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾರ್ಯಕ್ರಮದ ಮೊದಲಿಗೆ ವಾಮನ ನಂದಾವರ ಅವರ ಭಾವ ಚಿತ್ರಕ್ಕೆ ಪುಷ್ಪ
ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದರು. ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ಇವರು ಹಲವಾರು
ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ
ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ . ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಆತ್ಮಹತ್ಯೆಗೈದ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ