ರೆಮಲ್ ಚಂಡಮಾರುತವು ಪಡುವಣ ಬಂಗಾಳದಲ್ಲಿ ಹದಿನಾರಕ್ಕೂ ಹೆಚ್ಚು ಮತ್ತು ಬಾಂಗ್ಲಾದೇಶದಲ್ಲಿ ಹದಿನೆಂಟಕ್ಕೂ ಹೆಚ್ಚು ಜನರ ಪ್ರಾಣ ಹರಣ ಮಾಡಿದೆ. ಇದೇ ವೇಳೆ ಅಮೆರಿಕ ಸಂಯುಕ್ತ ಸಂಸ್ಥಾನದ ಬಯಲು ಪ್ರದೇಶದಲ್ಲಿ ದಿಗಿಣ ಹಾಕಿದ ಸುಳಿಗಾಳಿಯು ನಾಲ್ಕು ಮಕ್ಕಳ ಸಹಿತ ಹದಿನೆಂಟಕ್ಕೂ ಹೆಚ್ಚು ಮಂದಿಯ ಜೀವವನ್ನು ಹೀರಿದೆ. ರೆಮಲ್ ಚಂಡ ಸುಂಟರ ಕುಣಿತಕ್ಕೆ ಮರಗಳುರುಳಿ, ಕಟ್ಟಡಗಳು
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಮಾ.30ರಂದು ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸಾವರ, ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ನಿವಾಸಿ ವಿನಯ್(26ವ.)ಅವರು ಚಿಕಿತ್ಸೆಗೆ ಸ್ಪಂದಿಸದೆ ಮಾ.31ರ ಮಧ್ಯಾಹ್ನದ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸಣ್ಣಂಪಾಡಿ ನಿವಾಸಿ ಜೇಕಬ್ ಅವರ
ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು .ದಶಕಗಳ ಕಾಲದ ಹಿಂದೆ ಪ್ರಾಥಮಿಕ ನವೋದಯ ಕಲಾವೃoದದಲ್ಲಿ ಮಸಣಕ್ಕೆ, ತರಂಗ ತರಂಗ ಅಂತರಂಗ, ಹೆಗಲಿಗೆ
ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ ವಿವಿಧ ಜೈನ ಧಾರ್ಮಿಕ ಆರಾಧನೆಗಳಲ್ಲಿ ಪುರೋಹಿತರಾಗಿ ಪಾಲ್ಗೊಂಡಿದ್ದರು.ಜೈನ ಧಾರ್ಮಿಕ ಆರಾಧನಾ
ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು
ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ ಮನೆ ಮನೆಗೆ ಮಾಹಿತಿ ನೀಡುವ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಆನೆಗುಡ್ಡೆ ಚರ್ಚ್ ನಲ್ಲಿ ನಡೆದ
ಮಂಗಳೂರಿನ ಕೊಟ್ಟಾರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟರ್‌ಗೆ ಲಾರಿಯೊಂದು ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.
ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ
ಉಡುಪಿ : ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ತೋಡಿನಿಂದ ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು