Home Posts tagged #death (Page 3)

ಕ್ಷುಲ್ಲಕ ವಿಚಾರಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಕೊಲೆ ದೃಶ್ಯವು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊಲೆಯಾದವರನ್ನು ಕಾರ್‌ಸ್ಟ್ರೀಟ್‌ನ ಮಹಮ್ಮಾಯಿ ದೇವಸ್ಥಾನ ರಸ್ತೆಯಲ್ಲಿರುವ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ

ದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್

ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು ತಾಯಿ, ಮಗು ಸಾವು

ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ನಾಡ ಗ್ರಾಮದ ಚುಂಗಿಗುಡ್ಡೆಯಲ್ಲಿ ಸಂಭವಿಸಿದೆ. ನಾಡ ಗ್ರಾಮದ ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು. ರೋಸಿರಿಯಾ ಅವರು ಹಿಂದೆ ಕುವೈಟ್‌ನಲ್ಲಿ ಜೆಟ್

ಸರಕಾರಿ ಆಸ್ಪತ್ರೆಯ ಪ್ರಖ್ಯಾತ ವೈದ್ಯರಾದ ಡಾ.ಸಂದೀಪ್ ಕುಮಾರ್ ಬೋರ್ಕರ್ ನಿಧನ

ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ ಸಲ್ಲಿಸುತ್ತಿದ್ಸು, ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಇವರು ಹಿಂದೆ ಮಂಗಳೂರಿನ

ಚೀನಾದಲ್ಲಿ ಧಾರಕಾರ ಮಳೆ: 12 ಮಂದಿ ಸಾವು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9 ಮಿ,ಮೀ ಮಳೆಯಾಗಿದೆ. ಝೆಂಗ್ಜು ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ಹರಿಯುತ್ತಿದ್ದು, ನೂರಾರು ಮನೆ ಮಠಗಳು ನಾಶವಾಗಿವೆ. ಇದುವರೆಗೂ 12 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಮುಂಜಾಗೃತಾ

ಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.