2011ನೇ ಇಸವಿಯಲ್ಲಿ ಇಡೀ ಕರ್ನಾಟಕದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸುಮಾರು ಮೂರು ಲಕ್ಷ ಮನೆಗಳಿಗೆ ಸೋಲಾರ್ ದೀಪಗಳ ವ್ಯವಸ್ಥೆ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದ ಅನ್ನಪೂರ್ಣ ಚಿತ್ರದಲ್ಲಿ ಸುಮಾರು ೫೦ ಲಕ್ಷ ವ್ಯತ್ಯಾಸದ ಸೆಲ್ಕ್ಕೋ ಫೌಂಡೇಶನ್ ಪ್ರಾಯೋಜತ್ವದಲ್ಲಿ ಅಳವಡಿಸಲಾದ ಉಚಿತ ಸೌರ ವಿದ್ಯುತ್
ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ
ಅಚ್ಚ ತುಳು ನೆಲ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ. ಪ್ರತಿ 12 ವರ್ಷಕ್ಕೊಮ್ಮೆ ಗೊಮ್ಮಟ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಆದಿಯಲ್ಲಿ ಕ್ರಮವಾಗಿ ಮೂರು ಮಹಾ ಮಸ್ತಕಾಭಿಷೇಕ ನಡೆದು ಮಧ್ಯೆ ನಾನಾ ಕಾರಣಕ್ಕೆ ನಿಂತು ಹೋಗಿ ತೀರಾ ಕೊನೆಗೆ ಆರಂಭವಾದುದು ವೇಣೂರು ಮಹಾಮಸ್ತಕಾಭಿಷೇಕ. 2000 ಮತ್ತು 2012ನೇ ಇಸವಿಯಲ್ಲಿ ನಡೆದಿತ್ತು. ಇದು ವೇಣೂರಿನ ಈ ಕಾಲದ ಮೂರನೆಯ ಮಹಾಮಸ್ತಕಾಭಿಷೇಕ. ತುಳುನಾಡಿನ ಜೈನ ಭೂಮಿಕೆಯ ಮುಖ್ಯ ಕೊಂಡಿಗಳಾದ ಬೆದ್ರ ಅಥವಾ ಮೂಡಬಿದಿರೆ, ಕಾರ್ಲ
ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಧರ್ಮಸ್ಥಳದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ದ್ರವ ಸಾರ ಜನಕ ಜಾಡಿಗಳ ವಿತರಣಾ ಕಾರ್ಯಕ್ರಮ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಹಾಲಿನ ಉತ್ಪಾದನೆಯಲ್ಲಿ ಹೆಚ್ಚಿಸಿ ಕೊಳ್ಳಬೇಕಾದ ಅನಿವಾರ್ಯತೆಯಿದೆ.
ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್ ಭಂಡಾರಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮದ್ಯವರ್ಜನ ಶಿಬಿರಗಳು ಸಾಮಾಜಿಕ ಪರಿವರ್ತನೆಯಲ್ಲಿ ಬಹಳಷ್ಟು ಪರಿಣಾಮ ಬೀರಿದ್ದು ಇಂತಹ ಶಿಬಿರಗಳು ದೇಶವ್ಯಾಪಿ ನಡೆದಾಗ
ಧರ್ಮಸ್ಥಳಕ್ಕೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ,ಕೃಷ್ಣಪ್ಪ ಅವರು ಧರ್ಮಸ್ಥಳಕ್ಕೆ ಆಗಮಿಸಿ ನೀಡಿ ಹೆಗ್ಗಡೆಯವರ ಭೇಟಿ ನೀಡಿದರು. ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಸುಳ್ಯ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ, ನಿರುದ್ಯೋಗ ಸಮಸ್ಯೆ, ಎಲೆ ಚುಕ್ಕಿ ರೋಗ ಇಂಥ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಮಾಡಿದರು. ಇದೇ ವೇಳೆ ಮಾದ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬ ಶ್ರೀ ಮಂಜುನಾಥ ದೇವರ ಆರಾಧಕರು ಎಂದ ಅವರು, ಪಂಚರತ್ನ ಯೋಜನೆ ಬಗ್ಗೆ ರಾಜ್ಯದ ಜನತೆಯಲ್ಲಿ ಅರಿವು ಮೂಡಿದೆ.
ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ
ಪರ್ಲಾಣಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ತನ್ನ ಸುವರ್ಣೋತ್ಸವದಲ್ಲಿ ಇದ್ದು , 2022 -23ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪರ್ಲಾಣಿಯಲ್ಲಿ ಆಯೋಜಿಸಲಾಗಿದೆ. ಏಳು ದಿನಗಳ ವಿಶೇಷ ಶಿಬಿರವು ಗುರುವಾರದಂದು ಗಣ್ಯರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವ ಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ