ಬಂಟ್ವಾಳ: ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ವಿವಿಧ ತಾಲೂಕಿನ ಒಟ್ಟು ೨೦ ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ ಕಳೆದ ಜಿಲೈ 4 ರಂದು 20 ಮಂದಿ ಯಾತ್ರಾರ್ಥಿಗಳು ಯಾತ್ರೆ ಕೈಗೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು