ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು
ಉಳ್ಳಾಲ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಸಹಿತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಡಿವೈಎಫ್‍ಐ ಉಳ್ಳಾಲ ತಾಲೂಕು ಸಮಿತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆ ಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಡಿವೈಎಫ್‍ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಖಾಯಂ ವೈದ್ಯರನ್ನು ನಿಯುಕ್ತಿ ಮಾಡಲು ಆರೋಗ್ಯ ಇಲಾಖೆ ವಿಫಲವಾಗಿದೆ. ಬಾಣಂತಿಯರಿಗೆ ಬಿಸಿನೀರಿನ ವ್ಯವಸ್ಥೆಯಿಲ್ಲ, 108 ಆಂಬ್ಯುಲೆನ್ಸ್ ಸೇವೆ ಆರೋಗ್ಯ
ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷಮಿಸದು ಎಂದು ಅಖಿಲ ಭಾರತ ವಿಚಾರವಾದಿ ಸಂಘದ ರಾಷ್ಟ್ರ ಅಧ್ಯಕ್ಷರಾದ ಪ್ರೊಫೆಸರ್ ನರೇಂದ್ರ ನಾಯಕ್ ರವರು ಮಣಿಪುರದಲ್ಲಿ ನಡೆಯುತ್ತಿರುವ ಆದಿವಾಸಿಗಳ ಮೇಲಿನ ಹಿಂಸಾಚಾರದ ಘಟನೆಗಳನ್ನು ಖಂಡಿಸಿ ಆದಿವಾಸಿ
ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇಂದು (19-7-2023) ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗವು ಮನವಿಯನ್ನು ಸಲ್ಲಿಸಿದೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ,ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್ಐ ಮುಖಂಡರಾದ ಉಸ್ಮಾನ್ ಕಣ್ಣೂರ್, ಆಸೀಫ್, ರಿಯಾಝ್ ಮುಂತಾದವರು ಉಪಸ್ಥಿತರಿದ್ದರು.
ಉರ್ವಸ್ಟೋರ್ ಸುಂಕದಕಟ್ಟೆಯ ನಾಗರಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಧೀರ್ಘ ಕಾಲದಿಂದ ಅನುಭವಿಸುತ್ತಿದ್ದು, ಅದನ್ನು ಪರಿಹರಿಸಬೇಕಾದ ಸ್ಥಳೀಯ ಕಾರ್ಪೊರೇಟರ್ ತನ್ನ ಜವಾಬ್ದಾರಿಯನ್ನು ಮರೆತು ನಾಗರಿಕರ ಮೇಲೆಯೇ ಎಗರಾಡಿ ಅಸಂಬದ್ಧ ಮಾತುಗಳನ್ನಾಡಿದ್ದು,ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು DYFI ನೇತೃತ್ವದಲ್ಲಿ ಮನಪಾ ಮೇಯರ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದಲ್ಲಿ ತಲೆದೋರಿದ ಕುಡಿಯುವ ನೀರಿನ ಸಮಸ್ಯೆ
ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ. ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ
ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳಲ್ಲೊಂದಾದ ಆರ್ಟಿಕಲ್ 51A(h) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಡನಂಬಿಕೆಗಳನ್ನೇ ಅನಾಚಾರಗಳನ್ನೇ ಮಾತ್ರವಲ್ಲ ಒಟ್ಟು ದೇಶದ ಸಂವಿಧಾನದ ಎಲ್ಲಾ ಆಶಯಗಳನ್ನೇ ಬುಡಮೇಲು ಮಾಡಲೊರಟಿದೆ ಇಂತಹ ಸಂದಿಗ್ಧ ವಿದ್ಯಮಾನದಲ್ಲಿ ದೇಶದ ಜನರನ್ನು ಮೂಡನಂಬಿಕೆಯಿಂದ ಹೊರತರುವ, ವೈಜ್ಞಾನಿಕ ಚಿಂತನೆ ಬೆಳೆಸುವ ನಿಟ್ಟಿನಲ್ಲಿ ನಾವು ದೇಶದಾದ್ಯಂತ
ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕರು ಬಲಪಂಥೀಯ ಉಗ್ರಗಾಮಿಗಳ ದಾಳಿಗೊಳಗಾಗುವ ಹಿಟ್ ಲೀಸ್ಟ್ ನಲ್ಲಿ ಇರುವ ಸಲುವಾಗಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ಏಕಾಏಕಿ ರದ್ದುಗೊಳಿಸಿರೋದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಅವರ
ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು ಭಗತ್ ಸಿಂಗರ ಕನಸಾಗಿತ್ತು ಎಂದು ಡಿವೈಎಫ್ಐ ದ.ಕ ಜಿಲ್ಲಾ ಮುಖಂಡರಾದ ಶ್ರೀನಾಥ್ ಕುಲಾಲ್ ಇಂದು 23-3-2023 ಡಿವೈಎಫ್ಐ ಮಂಗಳೂರು ನಗರ ಸಮಿತಿ ಭಗತ್ ಸಿಂಗರ ಹುತಾತ್ಮ ದಿನದ ಅಂಗವಾಗಿ ನಿರುದ್ಯೋಗದ ವಿರುದ್ಧ ಸೌಹಾರ್ದ