ಸ್ವಾತಂತ್ರ್ಯ ಚಳುವಳಿಯ ಧ್ರುವತಾರೆಗಳಾದ ಶಹೀದ್ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳಾದ ರಾಜ್ ಗುರು, ಸುಖದೇವ್ ಅವರು ಬ್ರಿಟಿಷರ ನೇಣುಗಂಬಕ್ಕೆ ನಗು ನಗುತ್ತಲೇ ಏರಿದ ಹುತಾತ್ಮರಾದ ಕ್ರಾಂತಿಕಾರಿಗಳ ಬಲಿದಾನವನ್ನು ನೆನಪಿಸಿ ಡಿವೈಎಫ್ಐ ಸುರತ್ಕಲ್ ಘಟಕದ ಆಶ್ರಯದಲ್ಲಿ ಕಾನ ಜಂಕ್ಷನ್ ಬಳಿ ಕ್ಯಾಂಡಲ್ ದೀಪ ಬೆಳಗಿ ಹುತಾತ್ಮರಾದ ಧೀರ ಸಂಗಾತಿಗಳಿಗೆ ಕೆಂಪು ವಂದನೆ
ಕಾಸರಗೋಡು ಜಿಲ್ಲೆಯ ಪೆರ್ಲದ ಬೆದ್ರಂಪಳ್ಳದಲ್ಲಿ ಡಿ.ವೈ.ಎಫ್.ಐ ನೇತೃತ್ವದಲ್ಲಿ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ದೊಂದಿ ಮೆರವಣಿಗೆ ನಡೆಯಿತು. ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಬೆದ್ರಂಪಳ್ಳದಲ್ಲಿ ನಡೆದ ದೊಂದಿ ಮೆರವಣಿಗೆಯನ್ನು ಡಿ.ವೈ.ಎಫ್.ಐ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆ ಸಚಿತಾ ಬಿ ಪೆರ್ಲ ಉದ್ಘಾಟಿಸಿದರು. ವಾಣಿಜ್ಯ ಸಿಲಿಂಡರ್ ಗೆ 350 ರೂಪಾಯಿ ಹಾಗೂ ಗೃಹ ಬಳಕೆಯ ಸಿಲಿಂಡರ್ ಗೆ 50 ರೂಪಾಯಿ ಏರಿಕೆ ಮಾಡುವ ಮೂಲಕ ಕೇಂದ್ರ ಸರಕಾರವು ಜನರ ಮೇಲೆ
ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿಯವರು ತಮ್ಮ ಅಧಿಕಾರವಧಿಯಲ್ಲಿ ಎರಡನೇ ಬಾರಿಗೆ ಇಂದು ಸದನದಲ್ಲಿ ಮಂಡಿಸಿದ ಆಯವ್ಯಯವು ರಾಜ್ಯದ ಯುವಜನರ ಬದುಕಿನ ಕುರಿತು ಯಾವುದೆ ಸ್ಪಷ್ಟ ಕಣ್ಣೋಟ ಹೊಂದಿಲ್ಲ. ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ನಿರುದ್ಯೋಗಿ ಯುವಕರಿಗೆ ಈ ಬಜೆಟ್ ನಿರಾಸೆ ಮೂಡಿಸಿದೆ. ಯುವಜನರ ಬದುಕಿಗೆ ಭದ್ರತೆ ನೀಡದ ಈ ಬಜೆಟ್ ಅನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ
ಫಾಝಿಲ್ ಕೊಲೆಯನ್ನು ಪ್ರತಿಕಾರದ ಕೊಲೆ ಎಂದು ಹೇಳಿಕೆ ಕೊಟ್ಟ ಶರಣ್ ಪಂಪ್ ವೆಲ್ ಬಂಧನಕ್ಕೆ ಒತ್ತಾಯಿಸಿ, ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಡಿವೈಎಫ್ಐ ಸಂಘಟನೆಯು (ಇಂದು 3-2-23)ನಗರದ ಮಿನಿವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿ ಶರಣ್ ಪಂಪ್ ವೆಲ್ ಹೇಳಿಕೆಯನ್ನು ಖಂಡಿಸಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಮಾತನಾಡುತ್ತಾ ತುಮಕೂರಿನ ಕಾರ್ಯಕ್ರಮವೊಂದರಲ್ಲಿ ಬಜರಂಗದಳದ ಮುಖಂಡ ಶರಣ್ ಪಂಪ್ ವೆಲ್ ಹೇಳಿಕೆ ನಾಗರೀಕ
ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು “ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ” ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್ದಾರೆ. ಗುಜರಾತ್ ಗಲಭೆಯ ಎರಡು ಸಾವಿರ ಜನರ ಕೊಲೆಯನ್ನೂ ಸಮರ್ಥಿಸಿಕೊಂಡಿದ್ದಾರೆ. ಇದು ತೀರಾ ಆತಂಕಕಾರಿ
ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ. ಈ
ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ದುಂಡಾವರ್ತನೆಯ ಭಾಗವಾಗಿಯೆ ಕಾಟಿಪಳ್ಳ ದಲ್ಲಿ ಜಲೀಲ್ ಎಂಬ ಅಮಾಯಕ ಅಂಗಡಿ ವ್ಯಾಪಾರಿಯ ಕೊಲೆಯಾಗಿದೆ. ಈ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ ಎಂದು ಡಿವೈಎಫ್ಐ ರಾಜ್ಯ ಸಮಿತಿ ಆರೋಪಿಸಿದೆ. ಕಳೆದ ಒಂದು ವರ್ಷದ
ಟೋಲ್‍ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್‍ಐಟಿಕೆ ಸಮೀಪ ಇರುವ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ