ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ
ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ
ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಇದಕ್ಕೂ ಮೊದಲು ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ಅವರ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ
ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸರಕಾರ ಹಾಗೂ ಕೆಐಡಿಬಿ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ಅವರು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.
ಆಮ್ ಆದ್ಮಿ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತೋಷ್ ಕಾಮತ್ ಅವರು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಮಂಗಳಾದೇವಿ ದೇವಳದಲ್ಲಿ ಕುಟುಂಬಿಕರು, ಪಕ್ಷದ ಮುಖಂಡರುಗಳು ಹಾಗೂ ಅಭಿಮಾನಿಗಳ ಜತೆಗೂಡಿ ಪೂಜೆ ಸಲ್ಲಿಸಿದ್ರು. ತದ ಬಳಿಕ ನಗರದ ಬಳ್ಳಾಲ್‍ಬಾಗ್‍ನಿಂದ ಮಹಾನಗರಪಾಲಿಕೆಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದ್ರು. ಈ ವೇಳೆ ಆಮ್ ಆದ್ಮಿ ಪಕ್ಷದಮುಖಂಡರಾದ