Home Posts tagged #farmer

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ

ಕೃಷಿ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ : ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ

ಮೂರು ಕೃಷಿ ಮಸೂದೆ ರೈತರ ಹೋರಾಟಕ್ಕೆ ಸಂದ ಜಯ : ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ

ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ

ಸೋಲಿನಿಂದ ಮೋದಿ ಸರ್ಕಾರ ಎಚ್ಚೆತ್ತುಕೊಂಡಿದೆ : ಮಾಜಿ ಸಚಿವ ರಮಾನಾಥ ರೈ

ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಆಸಕ್ತ ಗುಂಪಿನ ರೈತರಿಗೆ ಟರ್ಪಾಲ್ ವಿತರಣೆ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವರ್ತಕರಾಗಿ ನಡೆಸುತ್ತಿರುವ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದಿಂದ ಮೂರು ಆಸಕ್ತ ಗುಂಪಿನ ರೈತರಿಗೆ ಇಪ್ಪತ್ತಮೂರು ಟರ್ಪಾಲ್ ನ್ನು ಒಕ್ಕೂಟದ ಅಧ್ಯಕ್ಷ ರಾದ ಶ್ರೀ ಚಂದ್ರ ಪೂಜಾರಿಯವರು ವಿತರಿಸಿದರು ವಿತರಿಸಿ ಮಾತನಾಡಿದ ಅವರು ಆಕಸ್ಮಿಕ ಮಳೆ ಬರುತ್ತಿರುವ ಕಾರಣ ಭತ್ತ ಕಟಾವಿಗೆ ಸಹಾಯವಾಗಲೆಂದು ಒಕ್ಕೂಟದ ಸದಸ್ಯರಿಗೆ ಉತ್ತಮ ಗುಣಮಟ್ಟದ ಕ್ರಷಿ ಪರಿಕರಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗಿರುತ್ತದೆ

ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗ

ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ ಕೃಷಿಯಿಂದ ಹಿಂದೆ ಸರಿಯಲು ಮುಂದಾಗುತ್ತಿದ್ದಾರೆ. ಈಗಾಗಲೇ ಅಡಿಕೆ ಗಿಡಗಳಲ್ಲಿ ಹಳದಿ ರೋಗ ಕಂಡು

ಭತ್ತ ಕಟಾವು ಯಂತ್ರ ಬಾಡಿಗೆ ದರಕ್ಕೆ ಬೇಸತ್ತ ರೈತರು

ಭತ್ತ ಕಟಾವಿಗೆ ಯಂತ್ರ ಬಂದಿದ್ದು ಗಂಟೆಯೊಂದಕ್ಕೆ 2,500 ರೂ ದುಬಾರಿ ದರ ವಿಧಿಸುತ್ತಿದ್ದು, ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ ಬೇಡವೋ ಎಂಬ ಚಿಂತೆ ಕಾಡುತ್ತಿದೆ ಎಂದು ಮಟ್ಟು ಭಾಗದ ರೈತರು ತಮ್ಮ ಹತಾಶಾ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಒಂದೆಡೆ ಗದ್ದೆಗಳನ್ನು ಹಡಿಲು ಬಿಟ್ಟಲ್ಲಿ ಸರಕಾರ ಕ್ರಮ ತೆಗೆದುಕೊಳ್ಳುವ ಭೀತಿ, ಬೇಸಾಯ ಕೈಗೊಂಡರೆ ನಷ್ಟವನ್ನು ಅನುಭವಿಸುವ ಸಂಕಷ್ಟ. ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ