ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು
ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ
ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು
ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್, ಇಂಡಿಯನ್, ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್
ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಗ್ಯಾಸ್ ಸೋರಿಕೆ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಬೆಂಕಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು
ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ
ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ
ಮಂಗಳೂರಿನ ತೋಟ ಬೆಂಗ್ರೆ ಪರಿಸರದ ಜನರಲ್ ಸ್ಟೋರ್ ಗೆ ಬೆಂಕಿಸರಿಸುಮಾರು 2 ಘಂಟೆ ರಾತ್ರಿ ಜನರಲ್ ಸ್ಟೋರ್‍ಗೆ ಬೆಂಕಿ ಕಾಣಿಸಿದ್ದು ಇದ್ದನ್ನು ಗಮನಿಸಿದ್ದ ಸ್ಥಳೀಯರು ಕದ್ರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಮ್ಮಿಂದ ಆಗುವಷ್ಟು ಸ್ಥಳಿಯರೇ ನಂದಿಸುವಲ್ಲಿ ಕಾರ್ಯದಲ್ಲಿ ತೊಡಗಿದ್ದರು. ಬಳಿಕ ಬಂದ ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಜೊತೆ ಸೇರಿ ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಅಂಗಡಿಯ ವಸ್ತುಗಳೆಲ್ಲಾ ಸಂಪೂರ್ಣ