Home Posts tagged #fireaccident

ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ

ಕಾರ್ಕಳದ ಕೆನರಾ ಬ್ಯಾಂಕ್‍ನಲ್ಲಿ ಅಗ್ನಿ ಅನಾಹುತ

ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತುಗಳು ಹಾನಿಯಾಗಿಲ್ಲ. ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕರು ತಿಳಿಸಿದ್ದಾರೆ.

ಉಡುಪಿ : ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಆಕಸ್ಮಿಕ ಅಗ್ನಿ ಅವಘಡ

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರ ಸಮೀಪದಲ್ಲಿರುವ ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ

ಹಾಸನ : ಬೆಂಕಿ ತಗುಲಿ ಮನೆ ಸಂಪೂರ್ಣ ನಾಶ

ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ನಾಶವಾಗಿರುವ ಘಟನೆ ಹಾಸನ ತಾಲೂಕು ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು , ಕುಟುಂಬಸ್ಥರು ದಿಕ್ಕಿಲ್ಲದೆ ನರಳುವಂತಾಗಿದೆ. ಮನೆಯಲ್ಲಿ ವಾಸವಾಗಿದ್ದ ಹೇಮವತಿ ಮತ್ತು ಅವರ ಇಬ್ಬರು ಮಕ್ಕಳು ಭರತ್ ಮತ್ತು ಶ್ರಾವಣಿ . ಮನೆಯಲ್ಲಿದ್ದ ದವಸ ಧಾನ್ಯ ಬಟ್ಟೆ ಸಂಪೂರ್ಣ ನಾಶವಾಗಿದೆ. ಘಟನೆ