ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ
ಮೂಡುಬಿದಿರೆ: ಇಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್.ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.ಶ್ರೀಧರ್ ಅವರು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಈ ಹಿಂದೆ ಮೂಡುಬಿದಿರೆ ವಲಯಾರಣ್ಯಾಧಿಕಾರಿಯಾಗಿ
ಉಡುಪಿ : ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯೊಂದು ಸಿಲುಕಿಕೊಂಡಿತ್ತು. ತಂತಿಯು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿದ್ದ ಕಾರಣ ಚಿರತೆ ನರಳಾಡುತ್ತಿತ್ತು. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು.
ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.
ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ.ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ.ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಗುಂಪಿನಿಂದ ಮರಿಯಾನೆ ತಪ್ಪಿಸಿಕೊಂಡು ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮರಿಯಾನೆಯನ್ನು ಆನೆಗಳ
ವಿಟ್ಲ: ಪುಣಚ ಸಮೀಪದ ತೋರಣಕಟ್ಟೆಯಲ್ಲಿ ಪಾಳು ಬಾವಿಯೊಂದಕ್ಕೆ ನರಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಿರುಪಯುಕ್ತವಾದ ಬಾವಿಯ ಒಳಗೆ ಆಹಾರ ಅರಸಿಕೊಂಡು ಬಂದ ನರಿ ಬಿದ್ದಿದ್ದು, ಅದರ ಕೂಗು ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸಹಾಯಕ ವಲಯ ಅರಣ್ಯಾಧಿಕಾರಿ ಸೀತಾರಾಮ ನೇತೃತ್ವದಲ್ಲಿ ಸ್ಥಳೀಯ ನಿವಾಸಿ ವಾಮನ್ ನಾಯಕ್ ಎಂಬರು ಬಾವಿಗೆ ಇಳಿದು ನರಿಯನ್ನು ಗೋಣಿಗೆ
ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ ಕಲ್ಲಳ್ಳಿ ಅರಣ್ಯ ಮೀಸಲು ಪ್ರದೇಶದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಸಂಚುರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಬೇಟೆಯಾಡಲು ಬಳಸಿದ್ದ ಬಂಧೂಕು ಹಾಗೂ ವಾಹನಗಳನ್ನು