Home Posts tagged #gangolli

ಗಂಗೊಳ್ಳಿ: ಮೀನುಗಾರಿಕಾ ಬೋಟ್‍ಗೆ ಅಗ್ನಿ ಅವಘಡ: ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆಗೆ ಪ್ರಯತ್ನ: ಸಂಸದ ಬಿ. ವೈ ರಾಘವೇಂದ್ರ

ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 8 ಮೀನುಗಾರಿಕೆ ಬೋಟುಗಳು ಹಾಗೂ ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು

ಅರಬ್ಬಿ ಸಮುದ್ರದಲ್ಲಿ ನೀರು ಪಾಲಾಗಿದ್ದ ಮೀನುಗಾರನ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಸಮುದ್ರ ಪಾಲಾಗಿದ್ದ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವನನ್ನು ಗಂಗೊಳ್ಳಿ ಮೀನುಗಾರರ ರಕ್ಷಿಸಿದ ಘಟನೆ ನಡೆದಿದೆ. ಸುಮಾರು 25 ವರ್ಷಪ್ರಾಯದ ಮುರುಗನ್ ಎಂಬಾತ ಸದ್ಯ ಪವಾಡ ಸದೃಶ್ಯವಾಗಿ ಬದುಕುಳಿದ ಮೀನುಗಾರ. ಗಂಗೊಳ್ಳಿಯಿಂದ ಮೀನುಗಾರಿಕೆ ಕತೆಗಳಿದ್ದ 30 ಜನರಿದ್ದ ಬೋಟ್ ನವರಿಗೆ ಸುಮಾರು 14 ನಾಟಿಕಲ್ ಮೈಲ್ ದೂರದಲ್ಲಿ ವ್ಯಕ್ತಿಯೋರ್ವ ಸಮುದ್ರದಲ್ಲಿ ಈಜುತ್ತಿರುವುದು ಕಂಡುಬಂದಿದೆ. ಹತ್ತಿರಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಸಮುದ್ರದ

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು ನಿರ್ಮಾಣದ ಕಾರ್ಯ ಕನಸಾಗಿಯೇ ಉಳಿದಿದೆ. ಗಂಗೊಳ್ಳಿಯಲ್ಲಿ 2013ರಲ್ಲಿ 10 ಕೋಟಿ ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲಾಗಿತ್ತು. ಇದು 2016ರಲ್ಲಿ ಹಾನಿಗೊಳಗಾಯಿತು. 2018 ರಲ್ಲಿ ದುರಸ್ತಿಗಾಗಿ ಹೆಚ್ಚುವರಿ 3

ಗಂಗೊಳ್ಳಿ ಜೆಟ್ಟಿ ಕುಸಿತ ಪ್ರಕರಣ – ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು : ಎಸ್. ಅಂಗಾರ

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ  ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್. ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು

ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶ ಜೆಟ್ಟಿ ಭಾಗ ಕುಸಿತ

ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಸಂಜೆ 5.30 ರ ಹೊತ್ತಿಗೆ ಘಟನೆ ನಡೆದಿದ್ದು, ನಿರಂತರವಾಗಿ

ಮೀನು ಖರೀದಿಗೆ ಬಹಿಷ್ಕಾರ ಹಾಕಿ ಮಹಿಳೆಯರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಯಶ ಕಾಣದು: ಸದಾನಂದ ಉಪ್ಪಿನಕುದ್ರು

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ಭಾನುವಾರ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಮೂಲಕ ಮೀನುಗಾರ ಮಹಿಳೆಯರಿಗೆ ಆತ್ಮಸ್ಥೈರ್ಯ ನೀಡಿದರು. ಈ ವೇಳೆಯಲ್ಲಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ

ಗೋವು ಕಳ್ಳತನದ ವಿರುದ್ಧ ಹಿಂಜಾವೇ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ. ಹಲವಾರು ಬಾರಿ ದೂರು ನೀಡಿದರೂ

ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ: ಆರೋಪಿ ಸಹಿತ ಗಾಂಜಾ ವಶಕ್ಕೆ

ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್‌ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್, ನೇತ್ರತ್ವದಲ್ಲಿ ಅಪಾದಿತರಾದ ನಿಶಾನ್ ಮತ್ತು ಪ್ರಥಮ್ ಕುಮಾರ್ ಗಾಂಜಾ ಮಾರಾಟ

ಪರಸ್ಪರ ಸೌಹಾರ್ದತೆಯಿಂದ ಮೀನುಗಾರಿಕೆ ಮಾಡಲಿ ಎಂದು ಸತ್ಯನಾರಾಯಣ ಪೂಜೆ

ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಪ್ರಾಥಮಿಕ ಮೀನುಗಾರರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚಗೋಡು ಇವರ ನೇತೃತ್ವದಲ್ಲಿ ಮಸ್ತ್ಯ ಸಂಪತ್ತು ಹೇರಳವಾಗಿ ದೊರೆಯಲಿ ಮತ್ತು ಇತ್ತೀಚಿನ ದಿನಗಳಲ್ಲಿ ಮೀನಗಾರರಲ್ಲಿ ವೈಮನಸ್ಸು ಉಂಟಾಗುತ್ತಿದ್ದು ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಪರಸ್ಪರ ಸೌಹಾರ್ದತೆ ಯಿಂದ ಮೀನುಗಾರಿಕೆ ಮಾಡಲಿ ಎಂಬ ಸದುದ್ದೇಶದಿಂದ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಂಗೆ ಮಾತೆಗೆ ನಮೀಸುತ್ತಾ ಮತ್ಸ್ಯ ಬೇಟೆಯಾಡುವಾಗ