ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೆರಂಪಳ್ಳಿ ಎಂಬಲ್ಲಿ ಸಂಭವಿಸಿದೆ. ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಮಲ್ವಿನ್ ಡಿಸೋಜ ಅವರಿಗೆ
ಉಳ್ಳಾಲ: ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಭವಿಸಿದೆ.ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು ಜಿತೇಶ್ ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಬೆಳಿಗ್ಗೆ ಏಳದ ಸಂದರ್ಭ, ಮನೆಮಂದಿ ವಿಚಾರಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ
ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.