ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ. ಸ್ವಾತಂತ್ರ್ಯ ಕೇವಲ ಒಬ್ಬರ ಸ್ವತ್ತಲ್ಲ.
ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್‍ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಕಾನ್ಸಲೇಟ್ ಜನರಲ್ ರಣಧೀರ್ ಜೈಸ್ವಾಲ್ , ಪ್ರಸಿದ್ದ ಸಿನಿಮಾ ನಟಿ ಐಲಿನಾ
ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ ಭಾರತದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಈ ಮಹತ್ವಪೂರ್ಣ ಗಳಿಗೆಯನ್ನು ಬಹಳ ಅರ್ಥವತ್ತಾಗಿ
ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ನೀಡಿದ ಅವರು ನಮ್ಮ ದೇಶವಿಂದು ವಿಶ್ವದಲ್ಲೇ ಚಾರಿತ್ರಿಕ ಕಾಲಘಟ್ಟದಲ್ಲಿದೆ. ನಮಗೆ ಸಿಕ್ಕಿದ ಈ ಸ್ವಾತಂತ್ರ್ಯಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಅದೆಷ್ಟೋ ಕಷ್ಟನಷ್ಟಗಳನ್ನು ಹಿರಿಯರು