ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ನಿರಾಜೆ ಎಂಬಲ್ಲಿ ಪತಿ ಆತ್ಮ ಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರೆ ಇತ್ತ ಪತ್ನಿ ಮತ್ತು ಮಗ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಹಿಲ ಗ್ರಾಮದ ಜನತ ಕಾಲೋನಿ ನಿವಾಸಿ ಮುನಿರ್ ಎಂಬವರ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ
ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿಸೆಂಬರ್ 4ರಂದು ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಅಧ್ಯಯನ ಮಾಡುತ್ತಿದ್ದ ಚೈತನ್ಯ ಅವರು ಬಿಳಿನೆಲೆ ಮಹಿಳಾ ಭಜನಾ ತಂಡದ ಸಕ್ರಿಯ ಸದಸ್ಯೆಯಾಗಿದ್ದರು.
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ
ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು ಪತ್ನಿಯನ್ನು ಹುಡುಕಿಕೊಂಡು ತೋಟದ ಬಳಿಗೆ ಹೋದಾಗ ತೋಟದಲ್ಲಿರುವ ಕೆರೆಯಲ್ಲಿ ನೀರಿನ ಮೇಲೆ ಜಾನಕಿ ಅವರ
CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್‌ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ ಕೃಷ್ಣಮ್ಮ ಮತ್ತು ಬಿರ್ಮಣ್ಣ ಗೌಡ ಇವರ ಸುಪುತ್ರರಾಗಿರುವ ಇವರು ಪತ್ನಿ ವನಿತಾ ಹಾಗೂ ಜಗನ್ ಮತ್ತು
ಬೈಂದೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ ಪ್ರತಿಭಟಿಸುವವರ ವಿರುದ್ಧ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮಲೆನಾಡು ಜನ
ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ
ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ
ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ




























