ಪಡುಬಿದ್ರಿ:ಪಡುಬಿದ್ರಿಯ ದೀನ್ ಸ್ಟ್ರೀಟ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ಮೌಲ್ಯದ ರಾಡೋ ವಾಚನ್ನು ಕದ್ದೊಯ್ದ ಘಟನೆ ದಿನಾಂಕ 27/01/2026 ಮಂಗಳವಾರದಂದು ತಡರಾತ್ರಿ ನಡೆದಿದೆ. ಪಡುಬಿದ್ರಿಯ ದೀನ್ ಸ್ಟ್ರೀಟ್ ನಲ್ಲಿರುವ ಅಪ್ತಾಬ್ ಮಂಜಿಲ್ ಹೆಸರಿನ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ
ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಸಮೇತ ಮಕ್ಕಳ ಜೊತೆ ದಿನಾಂಕ 17 ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ನೀಡಿದ ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ
ಕಾಪು:ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಇಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ಬಸವರಾಜ ಹೊರಟ್ಟಿ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ
ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಗಣೇಶ್
ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ
ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68), ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು, ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಗೌರವಯುತವಾಗಿ ಜೀವನ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಕೈ ನಡುಕ ಸಮಸ್ಯೆ ಅವರನ್ನು ಬಾಧಿಸುತ್ತಿದ್ದು ಪಿಗ್ಮಿ ಸಂಗ್ರಹ
ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು,
ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕ




























