Home Posts tagged #kasaragodu (Page 2)

ಬಂದ್ಯೋಡ್ : ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆ

ಬಂದ್ಯೋಡ್ ನ ಅಡ್ಕ ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಚತುರ್ಥಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆದವು. ಹಗ್ಗ ಜಗ್ಗಾಟ ದಲ್ಲಿ ಶಿವ ಶಕ್ತಿ ಶಿರಿಯ ಈ ತಂಡಕ್ಕೆ ಪ್ರಥಮ ಬಹುಮಾನ ಹಾಗೂ ಪಿ ಎಫ್ ಸಿ ಪರಂಕಿಲ ತಂಡಕ್ಕೆ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ ವೀರನಗರ ಅಡ್ಕ ಶ್ರೀ ಉಳ್ಳಾಲ್ತಿ

ಮಂಜೇಶ್ವರ: ಕಸ ಎಸೆಯುವವರ ಪತ್ತೆಗೆ ಸಿಸಿ ಕ್ಯಾಮರಾ ಅಳವಡಿಕೆ

ಮಂಜೇಶ್ವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು ಇದರಿಂದ ಜನತೆ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದ್ದಾರೆ. ಮಂಜೇಶ್ವರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಹಲವು ರೀತಿಯ ವಿಭಿನ್ನವಾದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತಿದ್ದರೂ ಯಾವುದೂ ಫಲಪ್ರದವಾಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವ

ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ ೪೪ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.

ಬಿಲ್ಲವ ಸೇವಾ ಸಂಘ ಕಾಸರಗೋಡು ; ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಬಿಲ್ಲವ ಸೇವಾ ಸಂಘ(ರಿ ) ಕರಂದಕ್ಕಾಡ್ ಕಾಸರಗೋಡು, ಇದರ ಆಶ್ರಯದಲ್ಲಿ 169ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಶ್ರೀ ನಾರಾಯಣ ಗುರು ಸಭಾ ಮಂಟಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸಭೆಯಲ್ಲಿ ಶ್ರೀ ಕೇಶವ ಎ ಅಧ್ಯಕ್ಷತೆ ವಹಿಸಿದರು, ಹಿರಿಯ ವ್ಯಕ್ತಿತ್ವ ವಾದ ಸಂತನಡ್ಕ ತರವಾಡಿನ, ಬಾಡೂರ್ ಜಟಾದಾರಿ ದೈವದ ಪೂಜಾರಿಯಾದ ಕರಿಯಪ್ಪ ಪೂಜಾರಿ ಅವರನ್ನು ಫಲ ಪುಷ್ಪಗಳನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅದೇ ರೀತಿ ರಮಾನಂದ ಬಂಗೇರ, ಕೊರಗಪ್ಪ ಪೂಜಾರಿ, ಬಾಬು

ರಾಹುಲ್ ‘ದೋಷಿ’ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ – ಮೀಂಜ – ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ಮಂಜೇಶ್ವರ: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆಸಂತಸವನ್ನು ವ್ಯಕ್ತಪಡಿಸಿ ಮೀಂಜ ಮತ್ತು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಸುಂಕದಕಟ್ಟೆಯಿಂದ ಹೊರಟ ಮೆರವಣಿಗೆ ಮಜೀರ್ ಪಳ್ಳದಲ್ಲಿ ಸಮಾಪ್ತಿಗೊಂಡಿತು. ಸಂಭ್ರಮಾಚರಣೆಯಲ್ಲಿ ಮೀಂಜ ಮಂಡಲಾಧ್ಯಕ್ಷ ಶ್ರೀ ಇಕ್ಬಾಲ್ ಕಳಿಯೂರು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ಸ್ ಅಧ್ಯಕ್ಷ ಪಿ.

ಮಕ್ಸೂದ್ ಕೈಚಳಕದಿಂದ ಮೂಡಿಬಂದ ವಿವಿಧ ಕಲಾಕೃತಿ

ಮಂಜೇಶ್ವರ : ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಹಾಗೂ ಪೋಷಣೆ ಸಿಕ್ಕರೆ ಮಕ್ಕಳು ನ್ನಷ್ಟು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆ ಬಿ.ಎಸ್ ನಗರದ ಭಿನ್ನ ಚೇತನರಾಗಿರುವ ಕೆ.ನಾಸರ್ ಹಾಗೂ ಜುಬೈದ ದಂಪತಿಗಳ ಪುತ್ರ ಅಬೂಬಕ್ಕರ್ ಮಕ್ಸೂದ್. ಉದ್ಯಾವರ ಅಲ್ ಸಖಾಫ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕ ತನ್ನ ಕೈ ಚಳಕದಿಂದ ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿತ್ರಕಲೆಯಲ್ಲಿ ಅದ್ಭುತ ಸಾಧನೆಯನ್ನು ಮಾಡಿದ್ದಾನೆ. ಇಷ್ಟು

ಮಂಜೇಶ್ವರ: ಬೇಕೂರು ಶಾಲೆಯ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಜೇಶ್ವರ : ರ್‍ಯಾಗಿಂಗ್ ಎನ್ನುವುದು ಮಾನವ ಹಕ್ಕುಗಳ ದುರುಪಯೋಗದ ವ್ಯವಸ್ಥಿತ ರೂಪವಾಗಿದೆ. ವಿಪರೀತ ಕಿರುಕುಳ ನೀಡುವುದರ ಜೊತೆಗೆ ಮನಸ್ಸಿನಲ್ಲಿ ಭಯವನ್ನು ಸೃಷ್ಟಿ ಮಾಡುತ್ತಿರುವ ರ್ಯಾಗಿಂಗ್ ತಡೆಯಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗುತ್ತಿರುವ ಮಧ್ಯೆಯೇ ಬೇಕೂರು ಕುಂಬಳೆ ಹೈಯರ್ ಸೆಕಂಡರಿ ಶಾಲೆಯಲ್ಲಿ ಪ್ಲಸ್ ವನ್ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಯನ್ನು ಬಸ್ಸು ನಿಲ್ದಾಣದಲ್ಲಿ ಹಿಗ್ಗಾ ಮಗ್ಗಾ ಥಳಿಸಿ ಹಲ್ಲೆ ಗೈದು ಗಾಯಗೊಳಿಸಲಾಗಿದೆ. ಪೆರ್ಮುದೆ

ಉಪ್ಪಳ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯಿಂದ ಆಹಾರ ಸಾಮಾಗ್ರಿ ವಿತರಣೆ

ಮಂಜೇಶ್ವರ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ಬಡವು ಯೋಜನೆಯ 57ನೇ ಸೇವಾ ಕಾರ್ಯದ ವತಿಯಿಂದ ಉಪ್ಪಳ ಸಮೀಪದ ಪೈವಳಿಕೆ ಲಾಲ್ಬಾಗ್ ಬೋಳಂಗಳ ನಿವಾಸಿ ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಲ್ಯಾಣಿ ಕೃಷ್ಣ ದಂಪತಿಗಳ ಮನೆಯು ಶೋಚನಿಯಾವಸ್ಥೆಯಲ್ಲಿದ್ದು, ಅಲ್ಲದೇ ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ ಅನಾರೋಗ್ಯ ಇನ್ನೊಂದು ಕಡೆ. ಈ ಪರಿಸ್ಥಿತಿಯಲ್ಲಿ ಕಲ್ಯಾಣಿಯವರಿಗೆ ದಿಕ್ಕು ತೋಚದ ಪರಿಸ್ಥಿತಿ ಮೂರು

ಬದಿಯಡ್ಕದಲ್ಲಿ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

ಕಾಸರಗೋಡು ಜು 22: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಕೊಂಕಣಿ ಸಾಹಿತಿ, ಭಾಷಾ ತಜ್ನ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ ಶಂಕರ ಗ್ರಾಮಲೋಕ

ಮಂಜೇಶ್ವರದಲ್ಲಿ ಉದ್ಯೋಗ ಮೇಳ-2023

ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು. ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ರಾಷ್ಟ್ರೀಯ ಉದ್ಯೋಗ ಸೇವಾ ಇಲಾಖೆಯ ಮೂಲಕ ಉಚಿತ ಉದ್ಯೋಗ ವಲಯಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಯ ಅಂಗವಾಗಿ 50 ಕ್ಕೂ ಹೆಚ್ಚು ಅಧಿಕಾರಿಗಳು